ಹುಬ್ಬಳ್ಳಿ ಕಿಮ್ಸನಲ್ಲಿ ಪಾಸಿಟಿವ್ ರೋಗಿ ಆತ್ಮಹತ್ಯೆ…!

ಹುಬ್ಬಳ್ಳಿ: ಕಿಮ್ಸನಲ್ಲಿ ಕೊರೋನಾ ಪಾಸಿಟಿವ್ ನಿಂದ ಬಳಲುತ್ತಿದ್ದ ವೃದ್ಧನೋರ್ವ ಚಿಕಿತ್ಸಾ ಕೊಠಡಿಯ ಶೌಚಾಲಯದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಸುಮಾರು 78 ವಯಸ್ಸಿನ ವೃದ್ಧ, ಹುಬ್ಬಳ್ಳಿಯ ರಣದಮ್ಮ ಕಾಲನಿಯ ನಿವಾಸಿಯಂದು ಹೇಳಲಾಗಿದ್ದು, ಹಿಟ್ಟಿನ ಗಿರಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದನೆಂದು ಗೊತ್ತಾಗಿದೆ.
ಕೊರೋನಾ ಪಾಸಿಟಿವ್ ದೃಢಪಟ್ಟ ನಂತರ, ಚಿಕಿತ್ಸೆಗಾಗಿ ಕಿಮ್ಸಗೆ ದಾಖಲು ಮಾಡಲಾಗಿತ್ತು. ಈ ಸಮಯದಲ್ಲಿ ಮಾನಸಿಕವಾಗಿ ಭಯಗೊಂಡು ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕೆ ವ್ಯಕ್ತಪಡಿಸಲಾಗಿದೆ.
ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.