ವರ್ಷದ ಕೊನೆಯಲ್ಲಿ ಹುಬ್ಬಳ್ಳಿಯಲ್ಲಿ “ಮಹಾದುರಂತ”- ಸತ್ತವರ ಸಂಖ್ಯೆ ಆರಕ್ಕೇರಿಕೆ…!!!
1 min readಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಸಿಲಿಂಡರ್ ಸೋರಿಕೆ ಅಗ್ನಿ ಅವಘಡ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಮತ್ತೋರ್ವ ಮಾಲಾಧಾರಿ ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ ಆರಕ್ಕೇರಿಕೆಯಾಗಿದೆ.
ಮಂಜುನಾಥ ವಾಗ್ಮೋಡೆ (22 ವರ್ಷ) ಮರಣ ಹೊಂದಿದ್ದು, ಸುಮಾರು 70% ಸುಟ್ಟ ಗಾಯಗಳಿಂದ ಮಂಜುನಾಥ ನರಳುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವಾಗಿದೆ.
ಘಟನೆಯಲ್ಲಿ ಗಾಯಗೊಂಡಿರುವ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಪ್ರಕರಣದ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.