68ಕೋಟಿ ರೂ. ವೆಚ್ಚದ ಮೇಲ್ಸೇತುವೆ ಲೋಕಾರ್ಪಣೆ
ಕೊಪ್ಪಳ: ರಾಷ್ಟ್ರೀಯ ಹೆದ್ದಾರಿಯಲ್ಲಿ 68ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಮೇಲ್ಸೇತುವೆಯನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಲೋಕಾರ್ಪಣೆ ಮಾಡಿದರು.
ತದನಂತರ ಮಾತನಾಡಿದ ಗೋವಿಂದ ಕಾರಜೋಳ, ಈ ಭಾಗದ ಜನತೆಯು ಬಹುದಿನಗಳಿಂದ ಆಪೇಕ್ಷಿತರಾಗಿದ್ದರು. ಸಂಸದ ಕರಡಿ ಸಂಗಣ್ಣ ಅವರ ನಿರಂತರ ಪ್ರಯತ್ನದಿಂದ ಈ ಯೋಜನೆ ಅನುಷ್ಠಾನಗೊಂಡಿದೆ. ರಾಜ್ಯದ ಹೆದ್ದಾರಿ, ರಸ್ತೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ನೆರವು ನೀಡಿರುವ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ, ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಅಭಿನಂದಿಸುವುದಾಗಿ ತಿಳಿಸಿದರು.
ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಕರಡಿ ಸಂಗಣ್ಣ, ಶಾಸಕರುಗಳು , ವಿವಿಧ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.