Posts Slider

Karnataka Voice

Latest Kannada News

ಹುಬ್ಬಳ್ಳಿಯಲ್ಲಿ “ಪೊಲೀಸಪ್ಪನ ಮಡದಿ” ನೇಣಿಗೆ ಶರಣು…

1 min read
Spread the love

ಹುಬ್ಬಳ್ಳಿ: ಮನೆಯಲ್ಲಿನ ಕೌಟುಂಬಿಕ ಕಲಹದಿಂದ ಬೇಸತ್ತು ಕಾನ್ಸ್ಟೇಬಲ್ ಒಬ್ಬರ ಪತ್ನಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಂಚಾಕ್ಷರಿ ನಗರದಲ್ಲಿ ನಿನ್ನೇ ತಡ ರಾತ್ರಿ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯನ್ನು KSRPಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುವ ಸಂಗಮೇಶ ನಾಯ್ಕರ ಅವರ ಪತ್ನಿ ಸವಿತಾ ನಾಯ್ಕರ ಎಂಬುವರೇ ನಿನ್ನೇ ಮಧ್ಯಾಹ್ನ ಪಂಚಾಕ್ಷರಿ ನಗರದಲ್ಲಿನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯವರು ಸಾಕಷ್ಟು ಬಾರಿ ಕರೆ ಮಾಡಿದರು ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ರಾತ್ರಿ ಮನೆ ಬಾಗಿಲು ಮುರಿದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಮೃತಪಟ್ಟ ಸವಿತಾಳ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದಾರೆ


Spread the love

Leave a Reply

Your email address will not be published. Required fields are marked *

You may have missed