ಕುರುಬರ ಸಂಘದವರಿಗೆ ಸಿದ್ಧರಾಮಯ್ಯ ಶುಭಾಶಯ
ಬೆಂಗಳೂರು: ಕರ್ನಾಟಕ ಪ್ರದೇಶ ಕುರುಬರ ಸಂಘದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದರು.
ನೂತನ ಅಧ್ಯಕ್ಷ ಕೃಷ್ಣ, ಪ್ರಧಾನ ಕಾರ್ಯದರ್ಶಿ ವೆಂಕಟೇಶ ಮೂರ್ತಿ ಸೇರಿದಂತೆ 35 ಪದಾಧಿಕಾರಿಗಳು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನ ಭೇಟಿ ಮಾಡಿದರು. ಸಮಾಜದ ಒಳತಿಗಾಗಿ ಮುಂದಿನ ದಿನಗಳಲ್ಲಿ ಒಳ್ಳೆಯ ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗುವುದೆಂದು ಸಿದ್ಧರಾಮಯ್ಯನವರಿಗೆ ನೂತನ ಪದಾಧಿಕಾರಿಗಳು ಭರವಸೆ ನೀಡಿದರು.