ಜೂನ್-7ರ ವರೆಗೆ ಮತ್ತೆ ಲಾಕ್ ಡೌನ್- ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಜೂನ್ 7 ರ ವರೆಗೆ ಮತ್ತೆ ಲಾಕ್ ಡೌನ್ ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದ್ರು.

ಹಳ್ಳಿಗಳಿಗೆ ಹರಡಿರುವುದರಿಂದ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಠಿಣ ನಿರ್ಧಾರ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ. ಮೇ 14ರಿಂದ ಇನ್ನೂ 14 ದಿನ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಈಗಿನ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದೇ ಮುಂದುವರಿಯಲಿದೆ.
ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದನ್ನ ಕಡಿಮೆ ಮಾಡಲು ಸರಕಾರ ಹಲವು ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ.