ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರ ದಾರುಣ ಸಾವು

ಮಂಡ್ಯ: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಯುವಕರು ಸಾವಿಗೀಡಾದ ಘಟನೆ ಮಳವಳ್ಳಿ ತಾಲ್ಲೂಕಿನ ಬುಗತಗಹಳ್ಳಿ ಗ್ರಾಮದ ರೇಷ್ಮೆ ಮಾರುಕಟ್ಟೆ ಬಳಿ ನಡೆದಿದೆ.
ನರಸಿಪುರ ತಾಲ್ಲೂಕಿನ ಮಲಿಯೂರು ಗ್ರಾಮದ ಮಹೇಶ್ ಹಾಗೂ ಮಾದೇಶ್ ಮೃತ ದುರ್ದೈವಿಗಳಾಗಿದ್ದು, ಇವರು ಬೆಂಗಳೂರಿನಿಂದ ಊರಿಗೆ ವಾಪಸ್ ಹೋಗುತ್ತಿದ್ದಾಗ ಘಟನೆ ನಡೆದಿದೆ. ಬೆಂಗಳೂರಿನ ಎವಿಬಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಘಟನೆ ಬಳಿಕ ಅಪರಿಚಿತ ವಾಹನ ಪರಾರಿಯಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ಪರಿಶೀಲನೆ ಮಳವಳ್ಳಿ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.