ಮಂಗಳೂರು ಗಲಭೆ: 16ಆರೋಪಿಗಳಿಗೆ ಜಾಮೀನು

ಬೆಂಗಳೂರು: ಡಿಸೆಂಬರ್ 19ರಂದು ಮಂಗಳೂರು ನಗರದಲ್ಲಿ ನಡೆದ ಪೌರತ್ವ ಕಾಯ್ದೆ ತಿದ್ದುಪಡಿ ಪ್ರತಿಭಟನೆಯು ಹಿಂಸಾಚಾರಕ್ಕೆ ಹೋದ ಸಮಯದಲ್ಲಿ ಬಂಧಿತರಾಗಿದ್ದ 16ಜನರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದಿದ್ದ ಪ್ರತಿಭಟನೆಯ ವೇಳೆಯಲ್ಲಿ ಘರ್ಷಣೆ ನಡೆದು ಇಬ್ಬರು ಗೋಲಿಬಾರ್ ನಲ್ಲಿ ಸಾವನ್ನಪ್ಪಿದ್ದರು. ಸಾವನ್ನಪ್ಪಿದ ಇಬ್ಬರು ಸೇರಿದಂತೆ 29ಜನರ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದರು. ಅದರಲ್ಲಿ ಕೆಲವರನ್ನ ಬಂಧಿಸಿದ್ದರು. ಇದರಲ್ಲಿ ಕೆಲವರು ಅಧೀನ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರಾದರೂ ಅವರ ಅರ್ಜಿಯನ್ನ ವಜಾಗೊಳಿಸಲಾಗಿತ್ತು. ಇದೇ ಕಾರಣಕ್ಕೆ ಹೈಕೋರ್ಟ್ ಗೆ ಹೋಗಿದ್ದ ಆರೋಪಿಗಳು.