Posts Slider

Karnataka Voice

Latest Kannada News

ಹು-ಧಾ “ಧೀಮಂತ ಪ್ರಶಸ್ತಿ ಪುರಸ್ಕೃತ”ನಿಂದ ಹಣಕ್ಕಾಗಿ ಧಮಕಿ- ಕರವೇ ಲೂತಿಮಠ ವಿರುದ್ಧ FIR…

1 min read
Spread the love

ಸಚಿವರ ಹೆಸರಲ್ಲಿ ಬೆದರಿಕೆ ಆರೋಪ…

ಕರವೇ ಅಧ್ಯಕ್ಷ ಸೇರಿ ಹಲವರ ಮೇಲೆ ಪ್ರಕರಣ ದಾಖಲು

ಹುಬ್ಬಳ್ಳಿ: ‘ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ₹2 ಲಕ್ಷ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಂಗಡಿ ನಡೆಸದಂತೆ ಮಾಡುತ್ತೇನೆ’ ಎಂದು ಬೆದರಿಸಿದ ಆರೋಪದ ಮೇಲೆ ಮಂಜುನಾಥ ಲೂತಿಮಠ ಸೇರಿದಂತೆ ಎಂಟು ಮಂದಿ ವಿರುದ್ಧ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಂಟಿಕೇರಿ ಅಳಗುಂಡಗಿ ಓಣಿಯ ಉದ್ಯಮಿ ವಿಜಯ ಅಳಗುಂಡಗಿ ಅವರು ಕರವೇ ಪ್ರವೀಣ ಶೆಟ್ಟಿ ಬಣದ ಮಂಜುನಾಥ ಲೂತಿಮಠ, ರಾಹುಲ್‌, ಅಮಿತ್‌, ಪ್ರವೀಣ, ಬಸವರಾಜ, ಬಾಲು, ಪ್ರಕಾಶ ಮತ್ತು ವಿಜಯ ವಿರುದ್ಧ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ..?- ಕರ್ನಾಟಕ ರಕ್ಷಣಾ ವೇದಿಕೆಯ ಸ್ಥಳೀಯ ಅಧ್ಯಕ್ಷ ಎಂದು ಮಂಜುನಾಥ ಲೂತಿಮಠ ಅವರು, ಎರಡು–ಮೂರು ವರ್ಷಗಳಿಂದ ಸಹಚರರ ಜೊತೆ ಬಂದು ಬಟರ್‌ ಮಾರ್ಕೆಟ್‌, ಜವಳಿ ಸಾಲ, ಉಳ್ಳಾಗಡ್ಡಿ ಓಣಿ ವ್ಯಾಪರಸ್ಥರಿಗೆ ಹೆದರಿಸಿ ₹2 ಲಕ್ಷದಿಂದ ₹3 ಲಕ್ಷ ಹಣ ವಸೂಲಿ ಮಾಡಿದ್ದಾರೆ. ಅಕ್ಟೋಬರ್‌ 26ರಂದು ಉಳ್ಳಾಗಡ್ಡಿಮಠದ ಬಳಿಯ ನಿಖಿತಾ ಪ್ಲಾಸ್ಟಿಕ್‌ ಅಂಗಡಿ ಬಳಿ, ವಿಜಯ ಅವರನ್ನು ಕರೆಸಿಕೊಂಡು ರಾಜ್ಯೋತ್ಸವಕ್ಕೆ ₹2 ಲಕ್ಷ ಕೊಡಬೇಕು. ಪ್ರತಿ ಮೂರು ತಿಂಗಳಿಗೆ ನೀಡಬೇಕಾದ ₹1.70 ಲಕ್ಷ ಕಡ್ಡಾಯವಾಗಿ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಂಗಡಿ ನಡೆಸದಂತೆ ಮಾಡುತ್ತೇನೆ ಎಂದು ಧಮಕಿ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


Spread the love

Leave a Reply

Your email address will not be published. Required fields are marked *

You may have missed