ಮರೇವಾಡದಲ್ಲಿ 35 ವರ್ಷದ ಗ್ರಾಮ ಲೆಕ್ಕಾಧಿಕಾರಿಯ ಸಹಾಯಕ ಹೃದಯಾಘಾತದಿಂದ ಸಾವು….

ಧಾರವಾಡ ಜಿಲ್ಲೆಯಲ್ಲಿ ಮುಂದುವರಿದ ಹೃದಯಾಘಾತ
ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ.
ಇಂದು ಧಾರವಾಡ ತಾಲೂಕಿನ ಮರೇವಾಡ ಗ್ರಾಮದ 35 ವಯಸ್ಸಿನ ರವಿ ಮಲ್ನಾಡ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ರವಿ ಅವರು ಮರೇವಾಡ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಅವರ ಕೈಕೆಳಗಡೆ ಗ್ರಾಮ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋದ ಸಂದರ್ಭದಲ್ಲಿ ರವಿ ಅವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.