ಮಾಸ್ಕ್ ಧರಿಸದ ಮೂವರಿಗೆ ಕೊರೋನಾ ಪಾಸಿಟಿವ್: ಸಾರ್ವಜನಿಕರೇ ಹುಷಾರ್..!
ಹುಬ್ಬಳ್ಳಿ: ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯ ಕಲಘಟಗಿಯಲ್ಲಿ ಪ್ರಾರಂಭವಾಗಿದ್ದು, ಮಾಸ್ಕ್ ಧರಿಸದೇ ಬಂದ ಮೂವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಕಲಘಟಗಿ ಪಟ್ಟಣ ಪಂಚಾಯತ ಬಳಿ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕೌಂಟರ್ ಸ್ಥಾಪಿಸಿ ಮಾಸ್ಕ್ ಧರಿಸದೇ ತಿರುಗಾಡುತ್ತಿದ್ದ 130 ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಯಿತು. ಈ ಪೈಕಿ ಮೂವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದರಿಂದ ಅಗತ್ಯ ಚಿಕಿತ್ಸೆಗೆ ಏರ್ಪಾಡು ಮಾಡಲಾಗಿದೆ.
ತಹಶೀಲ್ದಾರ ಅಶೋಕ ಶಿಗ್ಗಾಂವ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಬಾಸೂರ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಚಂದ್ರಶೇಖರ ಬಿ.ತಾವರಗೇರಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.