MES ಬ್ಯಾನ್ : ಕರ್ನಾಟಕ್ ಪರ ಸಂಘಟನೆ ಒಕ್ಕೂಟದಿಂದ ಬೆಳಗಾವಿ ಚಲೋ
1 min readಹುಬ್ಬಳ್ಳಿ: ಬೆಳಗಾವಿ ಪಿರಣವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯಕ್ಕೆ ಸಂಬಂಧಿಸಿದಂತೆ. ಹುಬ್ಬಳ್ಳಿಯಿಂದ ಬೆಳಗಾವಿ ಚಲೋ ಆರಂಭಗೊಂಡಿದೆ.
ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರು ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮನ ಹೆಸರನ್ನು ಇಡಬೇಕು ಹಾಗೂ ಪಿರಣವಾಡಿಯ ಸರ್ಕಲ್ ಗೇ ಸಂಗೊಳ್ಳಿ ರಾಯಣ್ಣನ ಹೆಸರು ಇಡಬೇಕು ಎಂದು ಆಗ್ರಹಿಸಿದರು.
ಇಂದು ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿಯನ್ನು ಕೊಡಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಒಕ್ಕೂಟದ ಕಾರ್ಯಕರ್ತರು ಇಂದು ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುವ ಮುನ್ನ ಹೇಳಿದರು.