ಮುಸ್ಲಿಂ-ಕ್ರಿಶ್ಚಿಯನ್ನ-ಸಿಖ್ಖ್- ಬೌದ್ಧ-ಪಾರ್ಸಿ-ಜೈನ್: ವಿದ್ಯಾರ್ಥಿ ವೇತನ ಪಡೆಯಬೇಕಾ.. ಮಾಹಿತಿಯಿಲ್ಲಿದೆ ನೋಡಿ..

ಬೆಂಗಳೂರು: ಕರ್ನಾಟಕ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ನಿರ್ದೇಶನಾಲಯ ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ 2020-21ರ ಅನ್ವಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಬಗ್ಗೆ ಪ್ರಕಟಣೆಯನ್ನ ಹೊರಡಿಸಿದೆ.
ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 31-2020 ಕೊನೆಯ ದಿನಾಂಕವಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಹಾಗೂ ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನ ನೀಡಲಾಗುವುದೆಂದು ಮಾಹಿತಿಯನ್ನ ನೀಡಿದೆ. ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳೂ ಸಹ ಕರ್ನಾಟಕದಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಹರಾಗಿದ್ದಾರೆ.
ಕರ್ನಾಟಕದಲ್ಲಿರುವ ಅಲ್ಪಸಂಖ್ಯಾತ ವಿದ್ಯಾರ್ಥಿವೇತನ ಪಡೆದುಕೊಳ್ಳಲು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ಮತ್ತು ರಾಜ್ಯ ವಿದ್ಯಾರ್ಥಿವೇತನ ಈ ಎರಡೂ ಯೋಜನೆಗಳ ಅಡಿಯಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.