ಶಿಕ್ಷಣ ಸಚಿವ ಸುರೇಶಕುಮಾರ ಆರೋಗ್ಯ ಏರುಪೇರು- ಆಸ್ಪತ್ರೆಗೆ ಶಿಫ್ಟ್
1 min readಬೆಂಗಳೂರು: ಕೊರೋನಾ ಪಾಸಿಟಿವ್ ದೃಢಪಟ್ಟ ನಂತರ ಹೋಂ ಕ್ವಾರಂಟೈನಗೆ ಒಳಗಾಗಿದ್ದ ಶಿಕ್ಷಣ ಸಚಿವ ಸುರೇಶಕುಮಾರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಕ್ಟೋಬರ್ 5ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದ ಸಚಿವ ಎಸ್ ಸುರೇಶ್ ಕುಮಾರ್ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ಮನೆಯಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸಚಿವ ಎಸ್ ಸುರೇಶ್ ಕುಮಾರ್ ಅವರನ್ನು ಬೆಂಗಳೂರಿನ ಜಯನಗರದ ಬಿಐಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರು ಹೋಂ ಕ್ವಾರಂಟೈನ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.
ಹೋಂ ಕ್ವಾರಂಟೈನನಲ್ಲಿದ್ದರೂ ಶಿಕ್ಷಣ ವ್ಯವಸ್ಥೆಯ ಬಗ್ಗೆ ನಡೆದ ಹಲವು ಗೊಂದಲಗಳ ಬಗ್ಗೆ ಮನೆಯಲ್ಲೇ ಇದ್ದು, ಸೋಷಿಯಲ್ ಮೂಲಕ ಕೆಲವೊಂದು ಮಾಹಿತಿಗಳನ್ನ ರವಾನೆ ಮಾಡಿದ್ದರು.