ಹುಬ್ಬಳ್ಳಿ-ಧಾರವಾಡ ಪಾಲಿಕೆ ಮತ್ತೆ ಬಿಜೆಪಿಗೆ: ಸಚಿವ ಶಂಕರ ಪಾಟೀಲಮುನೇನಕೊಪ್ಪ ನಿರಂತರ ಪ್ರಯತ್ನ…!

ಧಾರವಾಡ: ಮಹಾನಗರ ಪಾಲಿಕೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರ ಹಿಡಿಯಬೇಕೆಂಬ ಸದುದ್ದೇಶದಿಂದ ನೂತನ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನಿರಂತರವಾಗಿ ಸಂಘಟನೆಯಲ್ಲಿ ತೊಡಗಿದ್ದು, ಪ್ರತಿಯೊಬ್ಬರನ್ನೂ ಜೊತೆಗೆ ಕರೆದುಕೊಂಡು ಹೋಗುತ್ತಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡಗಳಲ್ಲಿಯೂ ಉತ್ತಮ ಅಭ್ಯರ್ಥಿಗಳನ್ನ ಕಣಕ್ಕೀಳಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಮಾರ್ಗದರ್ಶನದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು, ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
ನಿರಂತರವಾಗಿ ಮೂರನೇಯ ಬಾರಿಗೆ ಬಿಜೆಪಿಯನ್ನ ಅಧಿಕಾರಕ್ಕೆ ತರುವುದಕ್ಕಾಗಿ ಪ್ರತಿ ವಾರ್ಡಿನ ಪ್ರಮುಖರೊಂದಿಗೆ ಸಂಪರ್ಕ ಹೊಂದಿದ್ದಲ್ಲದೇ, ಅವಶ್ಯಕತೆಯಿದ್ದಲ್ಲಿ ತಾವೇ ಸ್ವತಃ ಹೋಗಿ ಪ್ರಚಾರದಲ್ಲಿಯೂ ಭಾಗಿಯಾಗುತ್ತಿದ್ದಾರೆ.
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನೂತನ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಕೂಡಾ ಸಾಥ್ ನೀಡುತ್ತಿದ್ದಾರೆ. ಇನ್ನುಳಿದಂತೆ ನಗರ ಪ್ರದೇಶದಲ್ಲೂ ತಮ್ಮದೇ ರೀತಿಯ ಛಾಪು ಹೊಂದಿರುವ ಮುನೇನಕೊಪ್ಪ ಅವರು, ಪಕ್ಷಕ್ಕಾಗಿ ಎಲ್ಲವನ್ನೂ ಮಾಡುವುದಕ್ಕಾಗಿ ಸಿದ್ಧವಾಗಿದ್ದಾರೆ.