Posts Slider

Karnataka Voice

Latest Kannada News

ನಾಳೆ ಶಾಸಕ ಅಮೃತ ದೇಸಾಯಿ ಮನೆಗೆ ಮುತ್ತಿಗೆ…!

1 min read
Spread the love

ಧಾರವಾಡ: ನೀರಿನ ಕರದ ಬಾಕಿ ಹಣವನ್ನ ಮನ್ನಾ ಮಾಡುವಂತೆ ಆಗ್ರಹಿಸಿ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅವರ ಮನೆಗೆ ಮುತ್ತಿಗೆ ಹಾಕಲು ಧಾರವಾಡ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿರ್ಧರಿಸಿದೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಧಾರವಾಡದ ಕಲಾಭವನದಿಂದ ಮೆರವಣಿಗೆ ಮೂಲಕ ಶಾಸಕ ಅಮೃತ ದೇಸಾಯಿ ಅವರ ನಿವಾಸಕ್ಕೆ ತೆರಳಿ ಮುತ್ತಿಗೆ ಹಾಕಲು ನಿರ್ಧರಿಸಿರುವ ಕಾಂಗ್ರೆಸ್, ಪಕ್ಷದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುಂತೆ ಮನವಿ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಮಾಜಿ ಸದಸ್ಯರು, ಗ್ರಾಮೀಣ ಜಿಲ್ಲಾ ಪಂಚಾಯತಿ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು, ಎಪಿಎಂಸಿ ಸದಸ್ಯರು, ಪಿಎಲ್ ಡಿ ಬ್ಯಾಂಕ್ ನಿರ್ದೇಶಕರು ಹಾಗೂ ಗ್ರಾಮ ಪಂಚಾಯತಿಯ ಸದಸ್ಯರ ಜೊತೆಗೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಳವಯ್ಯ ಚಿಕ್ಕೋಪ್ಪ ಮನವಿ ಮಾಡಿಕೊಂಡಿದ್ದಾರೆ.

ನೀರಿನ ಕರದ ಬಾಕಿ ಹಣವನ್ನ ಮನ್ನಾ ಮಾಡುವಂತೆ ಕಾಂಗ್ರೆಸ್ ಶಾಸಕರ ಮನೆಗೆ ಮುತ್ತಿಗೆ ಹಾಕುವ ಮೂಲಕ ಒತ್ತಾಯಿಸಲಿದೆ.


Spread the love

Leave a Reply

Your email address will not be published. Required fields are marked *

You may have missed