ಕೊರೋನಾ ಗೆದ್ದು ಬಂದ 74ರ ಶಾಸಕ: ವ್ಹೀಲ್ ಚೇರನಲ್ಲೇ ಸ್ವಾಗತಿಸಿದ ಬಿಜೆಪಿ ಜಿಲ್ಲಾಧ್ಯಕ್ಷ
ಹುಬ್ಬಳ್ಳಿ: ಆಗಸ್ಟ್ 14ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಪಾಸಿಟಿವ್ ಗೆ ಚಿಕಿತ್ಸೆ ಪಡೆಯಲು ದಾಖಲಾಗಿದ್ದ, ಕಲಘಟಗಿ ಕ್ಷೇತ್ರದ ಶಾಸಕ ಸಿ.ಎಂ.ನಿಂಬಣ್ಣನವರ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದರು.
74 ವಯಸ್ಸಿನ ಶಾಸಕರು ಕಳೆದ ಎಂಟು ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಕೊರೋನಾ ಪಾಸಿಟಿವ್ ದೃಢಪಟ್ಟ ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೇ ಕಾರಣಕ್ಕೆ ಅವರು ಈ ಸಲ ಸ್ವಾತಂತ್ರ್ಯೋತ್ಸವದ ದಿನ ಧ್ವಜಾರೋಹಣ ಮಾಡಿರಲಿಲ್ಲ.
ಪೂರ್ಣ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಶಾಸಕ ನಿಂಬಣ್ಣನವರ ಗುಣಮುಖರಾಗಿ ಬಿಡುಗಡೆಯಾದರು. ಕೊರೋನಾ ಗೆದ್ದು ಬಂದ ಶಾಸಕರನ್ನ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ ಸೇರಿದಂತೆ ಹಲವರು ಉಪಸ್ಥಿತರಿದ್ದು, ಸ್ವಾಗತಿಸಿದರು.