ಶಾಸಕ ಶಂಕರ ಪಾಟೀಲಮುನೇನಕೊಪ್ಪಗೆ ಕೊರೋನಾ ಪಾಸಿಟಿವ್

ಬೆಂಗಳೂರು: ನವಲಗುಂದ ಕ್ಷೇತ್ರದ ಶಾಸಕ ಹಾಗೂ ಮೂಲಭೂತ ಸೌಕರ್ಯಗಳ ನಿಗಮದ ಅಧ್ಯಕ್ಷ ಶಂಕರ ಪಾಟೀಲಮುನೇನಕೊಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅವರೇ ಹೇಳಿಕೊಂಡಿದ್ದು, ತಮ್ಮ ಜೊತೆ ಸಂಪರ್ಕಕ್ಕೆ ಬಂದವರಿಗೆ ಟೆಸ್ಟ್ ಮಾಡಿಸಿಕೊಳ್ಳುವಂತೆ ಕೋರಿದ್ದಾರೆ.
ಅವರು ಬರೆದುಕೊಂಡಿದ್ದು ಹೀಗೆ…
ಇಂದು ಬೆಳಿಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿ ಕೊರೋನಾ ಪಾಸಿಟಿವ್ ಬಂದಿದೆ.
ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ.
CBC, RFT, LFT, ECG, ಸಿಟಿ ಸ್ಕ್ಯಾನ್, ಡಿ ಡೈಮರ್, LDH, Serum Ferricin ಹಾಗು CRP ಈ ಎಲ್ಲಾ ಪರೀಕ್ಷೆಗಳನ್ನು ವೈದ್ಯರು ಮಾಡಿದ್ದು ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ ಹಾಗೂ ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದೇನೆ.
ಕಳೆದ ಆರು ತಿಂಗಳುಗಳಿಂದ ಕೋವಿಡ್19ರ ವಿರುದ್ಧ ನಾನೂ ಸಹ ಒಬ್ಬ ಕೊರೋನಾ ವಾರಿಯರ್ ಆಗಿ ನಿರಂತರ ಜನಸೇವೆ ಮಾಡುತ್ತಿದ್ದು,
ನನ್ನ ಮತ ಕ್ಷೇತ್ರದ ಬಂಧುಗಳೇ, ನಿಮ್ಮ ಯಾವುದೇ ಸಮಸ್ಯೆಗಳಿಗೆ ದೂರವಾಣಿ ಮುಖಾಂತರ ನನ್ನನ್ನು ಸಂಪರ್ಕಿಸಬಹುದು.
ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ನಾನು ಆದಷ್ಟು ಬೇಗ ಗುಣಮುಖನಾಗಿ ಬರುತ್ತೇನೆ, ಜೊತೆಗೆ ನಿಮ್ಮೆಲ್ಲರ ಯೋಗಕ್ಷೇಮವು ನನಗೆ ಅಷ್ಟೇ ಮುಖ್ಯವಾಗಿದೆ.