74ವರ್ಷದ ಶಾಸಕ ನಿಂಬಣ್ಣನವರಗೆ ಕೊರೋನಾ: ಕಿಮ್ಸ್ ಬಿಟ್ಟು ಖಾಸಗಿ ಆಸ್ಪತ್ರೆಗೆ ದಾಖಲು
ಹುಬ್ಬಳ್ಳಿ: ಕಲಘಟಗಿ ಕ್ಷೇತ್ರದ ಶಾಸಕ ಸಿ.ಎಂ.ನಿಂಬಣ್ಣನವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
74 ವಯಸ್ಸಿನ ಸಿ.ಎಂ.ನಿಂಬಣ್ಣನವರಿಗೆ ಪಾಸಿಟಿವ್ ದೃಢವಾದ ನಂತರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಆರಂಭವಾಗಿದೆ. ಕೆಲ ದಿನಗಳ ಹಿಂದಷ್ಟೇ ಸಚಿವ ಶ್ರೀರಾಮುಲುಗೆ ಕೊರೋನಾ ಪಾಸಿಟಿವ್ ಬಂದ ನಂತರ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಬಹುತೇಕರ ಪ್ರಶಂಸೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲ, ಶಾಸಕ ಪ್ರಸಾದ ಅಬ್ಬಯ್ಯ ಕೂಡಾ ಕೊರೋನಾ ಪಾಸಿಟಿವ್ ಆದಾಗ ಕಿಮ್ಸ್ ಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ಕಲಘಟಗಿ ಕ್ಷೇತ್ರದ ಶಾಸಕರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಗೆ ಒಳಗಾದ ಎರಡನೇಯ ಶಾಸಕರಿವರು.
ಶಾಸಕರ ಜೊತೆ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಆಗಬೇಕು ಮತ್ತೂ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಅವರ ಜೊತೆಯಿದ್ದವರು ಕೇಳಿಕೊಂಡಿದ್ದಾರೆ.