Posts Slider

Karnataka Voice

Latest Kannada News

ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಇನ್ನಿಲ್ಲ

1 min read
Spread the love

ವಿಜಯಪುರ..

*ಹಿರಿಯ ಜೆಡಿಎಸ್ ಶಾಸಕ ಎಂ ಸಿ ಮನಗೂಳಿ ನಿಧನ*

ಬೆಂಗಳೂರು ಅಪೋಲೋ ಆಸ್ಪತ್ರೆಯಲ್ಲಿ ನಿಧನ

ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಶಾಸಕ ಎಂ ಸಿ ಮನಗೂಳಿ ಅವರಿಗೆ 85 ವಯಸ್ಸಾಗಿತ್ತು

ಕಳೆದ 15 ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.

ಮಾಜಿ ಪ್ರಧಾನಿ ದೇವೇಗೌಡರ ಪರಮಾಪ್ತರಾಗಿದ್ದ ಎಂಸಿ ಮನಗೂಳಿ.

ಪೂರ್ಣ ಹೆಸರು ಮಲ್ಲಪ್ಪ‌ ಚೆನ್ನವೀರಪ್ಪ ಮನಗೂಳಿ

ಹುಟ್ಟೂರು ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ

ಪತ್ನಿ ಸಿಂದಗಿ ಪಟ್ಟಣದ ಬಿರಾದಾರ್ ಮನೆತನದ ಹೆಣ್ಣುಮಗಳು, ಸಿದ್ದಮ್ಮಗೌಡ್ತಿ ಬಿರಾದಾರ್

ಇವರಿಗೆ 4 ಜನ ಗಂಡು ಮಕ್ಕಳು, ಓರ್ವ ಹೆಣ್ಣುಮಗಳು

ಡಾ. ಅರವಿಂದ ಮನಗೂಳಿ, ಅಶೋಕ ಮನಗೂಳಿ, ಡಾ. ಶಾಂತವೀರ ಮನಗೂಳಿ (ಪುರಸಭೆ ಅಧ್ಯಕ್ಷ), ಡಾ. ಚನ್ನವೀರ ಮನಗೂಳಿ, ಅನ್ನಪೂರ್ಣ ನಿಡೋಣಿ (ಮಗಳು)

2018ರ ವಿಧಾನ ಸಭೆ ಚುನಾವಣೆಯಲ್ಲಿ ಇದೇ ನನ್ನ ಕೊನೆಯ ಚುನಾವಣೆ ಎಂದಿದ್ದ ಮನಗೂಳಿ ಮುತ್ಯಾ ಕೊನೆಗೂ ಅಧಿಕಾರವಧಿಯಲ್ಲೇ ಕೊನೆಯುಸಿರೆಳೆದರು.
ಕಳೆದ ಹದಿನೈದು ದಿನಗಳಿಂದ ಉಸಿರಾಟದ ತೊಂದರೆಯಿಂದಾಗಿ ಶಾಸಕ ಮನಗೂಳಿ ಬಳಲುತ್ತಿದ್ದರು. ಜ.9 ರಂದು ಏರ್ ಲಿಫ್ಟ್ ಮಾಡಲಾಗಿತ್ತು. ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಕೊನೆಗೂ ಚಿಕಿತ್ಸೆ ಫಲಿಸದೇ ವಿಧಿವಶರಾದರು.
1994 ಹಾಗೂ 2018ರ ವಿಧಾನ ಸಭೆ ಚುನಾವಣೆಯಲ್ಲಿ ವಿಜೇತರಾದ ಮನಗೂಳಿ ಮುತ್ಯಾ ಗೆದ್ದಾಗೊಮ್ಮೆ ಮಂತ್ರಿ ಪಟ್ಟ ಫಿಕ್ಸ್ ಎನ್ನುತ್ತಿದ್ದರು. ಮೊದಲ ಬಾರಿ ಶಾಸಕರಾದಾಗ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಎರಡನೇ ಬಾರಿ ತೋಟಗಾರಿಕೆ ಮಂತ್ರಿಯಾಗಿ ಬರದ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ.
ಬಿಜೆಪಿ ಮಾಜಿ ಶಾಸಕ ರಮೇಶ ಭೂಸನೂರ ವಿರುದ್ಧ 2018 ರ ವಿಧಾನ ಸಭೆ ಚುನಾವಣೆಯಲ್ಲಿ 9305 ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಬಳಿಕ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಭಾಗ್ಯವೂ ಒಲಿದು ಬಂತು. ತೋಟಗಾರಿಕೆ ಇಲಾಖೆ ಸಚಿವರಾಗಿ ಮನಗೂಳಿ ಜಿಲ್ಲೆಗೆ ತೋಟಗಾರಿಕೆ ಕಾಲೇಜ್ ಕೊಡಿಸುವಲ್ಲಿ ಸಫಲರಾಗಿದ್ದರು. ಅಲ್ಲದೇ ಸದರಿ ಕಾಲೇಜ್ ತಮ್ಮ ಕ್ಷೇತ್ರದ
ಆಲಮೇಲದಲ್ಲಿಯೇ ಆಗಬೇಕೆಂಬ ಕನಸು ಕಂಡಿದ್ದರು.
ಅದಕ್ಕಾಗಿ ಸಾಕಷ್ಟು ಪ್ರಯತ್ನ ಮಾಡಿದ್ದರು.

ಗುತ್ತಿಬಸವಣ್ಣ ಏತನೀರಾವರಿ ಯೋಜನೆ ಹರಿಕಾರ: ಗುತ್ತಿ
ಬಸವಣ್ಣ ಏತ ನೀರಾವರಿ ಯೋಜನೆಗಾಗಿ ಎಂ.ಸಿ.ಮನಗೂಳಿ ಸಾಕಷ್ಟು ಶ್ರಮ ವಹಿಸಿದ್ದರು.


Spread the love

Leave a Reply

Your email address will not be published. Required fields are marked *