Posts Slider

Karnataka Voice

Latest Kannada News

ಮಳೆ ನಿಂತು ಹೋದ ಮೇಲೆ: ಅಮೃತ ದೇಸಾಯಿ “ಆ” ಊರುಗಳಿಗೆ ಹೋಗಿದ್ಯಾಕೆ..?

1 min read
Spread the love

ಧಾರವಾಡ: ಇತ್ತೀಚೆಗೆ ಸುರಿದ ಅತಿವೃಷ್ಟಿಯಿಂದ  ಹಾನಿಯಾಗಿರುವ ಪ್ರದೇಶಗಳಿಗೆ ಶಾಸಕ ಅಮೃತ ದೇಸಾಯಿ ,ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.

ಹೆಸರು ಬೆಳೆ ಹಾನಿಯ ಕುರಿತು ರೈತರ ಅಹವಾಲುಗಳನ್ನು ಆಲಿಸಿದ ಶಾಸಕ ಹಾಗೂ ಜಿಲ್ಲಾಧಿಕಾರಿ, ಈ ಕುರಿತು ಮಂಗಳವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ‌‌. ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳ ಬೆಳೆಹಾನಿ ,ಪರಿಹಾರ ಮತ್ತಿತರ ವಿಷಯಗಳ ಕುರಿತು ಚರ್ಚಿಸಿ ಸರ್ಕಾರ  ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ವಿವರಿಸಿದರು.

 ತೇಲಿಹೋದ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ

ತುಪ್ಪರಿಹಳ್ಳದ ಪ್ರವಾಹದಲ್ಲಿ ತೇಲಿಹೋಗಿರುವ ಹಾರೋಬೆಳವಡಿಯ ಮಡಿವಾಳಪ್ಪ ಜಕ್ಕಣ್ಣವರ ಅವರ ತಂದೆ ನಾಗಪ್ಪ ಜಕ್ಕಣ್ಣವರ ಅವರಿಗೆ 5 ಲಕ್ಷ ರೂ.ಗಳ ಮೊತ್ತದ ಪರಿಹಾರದ ಚೆಕ್ ಹಸ್ತಾಂತರಿಸಲಾಯಿತು .

ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಐ.ಬಿ., ತಹಸೀಲ್ದಾರ ಡಾ.ಸಂತೋಷಕುಮಾರ ಬಿರಾದಾರ ಮತ್ತಿತರರು ಉಪಸ್ಥಿತರಿದ್ದರು.


Spread the love

Leave a Reply

Your email address will not be published. Required fields are marked *

You may have missed