ರಾಜ್ಯ ಸರಕಾರಕ್ಕೆ ಧನ್ಯವಾದ ತಿಳಿಸಿದ “ಕುಂದಗೋಳ ಶಾಸಕ” ಎಂ.ಆರ್…
1 min readಮತ್ತೆ ಪೋಡಿ ಯೋಜನೆ ಆರಂಭಿಸಿದ ಸರ್ಕಾರಕ್ಕೆ ಅಭಿನಂದನೆ: ಎಂ.ಆರ್.ಪಾಟೀಲ್
ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ನಗರ ಪ್ರದೇಶದ ಕ್ಷೇತ್ರ ಹೊರತುಪಡಿಸಿ ಉಳಿದ 174 ವಿಧಾನಸಭಾ ಕ್ಷೇತ್ರಗಳಲ್ಲಿ ಪೋಡಿ ಯೋಜನೆಯನ್ನು ಈ ಹಿಂದೆ ಬಿಜೆಪಿ ಸರ್ಕಾರ ಪ್ರಾರಂಭಿಸಲಾಗಿತ್ತು. ಆದರೆ ಸದ್ಯ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಈ ಮಹತ್ವಾಕಾಂಕ್ಷೆ ಯೋಜನೆಯನ್ನು ಜೂನ್ 30 ರಂದು ನಿಲ್ಲಿಸಿದರು. ಇದರಿಂದಾಗಿ ಕುಂದಗೋಳ ಕ್ಷೇತ್ರ ಸೇರಿದಂತೆ ರಾಜ್ಯದ ಬಹುತೇಕ ಜನರಿಗೆ ತೊಂದರೆ ಉಂಟಾಗಿತ್ತು.
ಈ ಬಗ್ಗೆ ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಶಾಸಕ ಎಂ.ಆರ್.ಪಾಟೀಲರು, ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾವನೆ ಮಾಡಿ, ಸದನದ ಉಳಿದ ಸದಸ್ಯರು ಹಾಗೂ ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಿದ್ದರು. ಇದೀಗ ಯೋಜನೆಯ ಮಹತ್ವವನ್ನು ಅರಿತಿರುವ ರಾಜ್ಯ ಸರ್ಕಾರ ಮತ್ತೆ ಪೋಡಿ ಮುಕ್ತ ಗ್ರಾಮ ಯೋಜನೆಯನ್ನು ಆರಂಭಿಸಿದ್ದು, ಸರ್ಕಾರದ ನಡೆಯನ್ನು ಶಾಸಕರು ಸ್ವಾಗತಿಸಿದ್ದಾರೆ.
ಇನ್ನು ಪೋಡಿ ಮುಕ್ತ ಗ್ರಾಮ ಯೋಜನೆಯ ಉದ್ದೇಶ ಆಯ್ದ ಗ್ರಾಮಗಳ ಬಹು ಮಾಲೀಕತ್ವದ ಖಾಸಗಿ/ಹಿಡುವಳಿ ಜಮೀನುಗಳನ್ನು ಅಳತೆಗೆ ಒಳಪಡಿಸಿ ಏಕಮಾಲೀಕತ್ವ ಪರಿವರ್ತಿಸುವುದು ಆಗಿದೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕಂದಾಯ ಇಲಾಖೆ ಈ ಯೋಜನೆಯನ್ನು ಆರಂಭಿಸಿತ್ತು.