ರಾಜ್ಯದ ಬಿಜೆಪಿಯ ಹಿರಿಯ ಶಾಸಕ ಇನ್ನಿಲ್ಲ..

ಸಿ.ಎಂ.ಉದಾಸಿ ನಿಧನ
ಬಿಜೆಪಿಯ ಹಿರಿಯ ಮುಖಂಡ, ಹಾನಗಲ್ ಕ್ಷೇತ್ರದ ಶಾಸಕ ಸಿ.ಎಂ ಉದಾಸಿ ನಿಧನರಾದರು. ರಾಜ್ಯ ರಾಜಕಾರದಣದಲ್ಲಿ ವಿಶೇಷ ಛಾಪನ್ನು ಮೂಡಿಸಿದ್ದ ಸಿ.ಎಂ ಉದಾಸಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಹಲವು ಇಲಾಖೆಗೆಗಳ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಿದವರು.
ಪಕ್ಷ ಹಿರಿಯ ಮುತ್ಸದ್ದಿ ರಾಜಕಾರಣಿ ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದ ಉದಾಸಿ ಸರಳ ಸಜ್ಜನಿಕೆಯ ರಾಜಕಾರಣಿ.
ಶಾಸಕ ಸಿ.ಎಂ. ಉದಾಸಿ ಅವರ ನಿಧನಕ್ಕೆ ಸಚಿವ ಜಗದೀಶ ಶೆಟ್ಟರ್ ಶೋಕ
ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರೂ ಹಾಗೂ ಲೋಕೋಪಯೋಗಿ ಖಾತೆಯ ಮಾಜಿ ಸಚಿವರೂ ಆದ ಸಿ.ಎಂ. ಉದಾಸಿ ಅವರ ನಿಧನಕ್ಕೆ ಬೃಹತ್,ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಸಿ ಎಂ ಉದಾಸಿ ಅವರು ಲೋಕೋಪಯೋಗಿ ಇಲಾಖಾ ಸಚಿವರಾಗಿದ್ದ ಸಂದರ್ಭದಲ್ಲಿ ರಾಜ್ಯದೆಲ್ಲೆಡೆ ವಿಶೇಷವಾಗಿ ರಸ್ತೆಗಳು ಮತ್ತು ಸೇತುವೆಗಳ ನಿರ್ಮಾಣ ಮತ್ತು ಸುಧಾರಣೆಗೆ ಕೈಗೊಂಡ ಕ್ರಮಗಳು ಇಂದಿಗೂ ಮಾದರಿಯಾಗಿವೆ.
ಸಿ.ಎಂ. ಉದಾಸಿ ಅವರ ಚೇತನಕ್ಕೆ ಶಾಂತಿ ಸಿಗಲಿ ಹಾಗೂ ಅವರ ಪುತ್ರ ,ಹಾವೇರಿ ಸಂಸದ ಶಿವಕುಮಾರ್ ಉದಾಸಿ ಅವರನ್ನು ಸೇರಿದಂತೆ ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳಿಗೆ ಅವರ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಸಚಿವ ಶೆಟ್ಟರ್ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಸಿ.ಎಂ.ಉದಾಸಿ ನಿಧನಕ್ಕೆ ಗೋವಿಂದ ಕಾರಜೋಳ ತೀವ್ರ ಸಂತಾಪ
ಬೆಂಗಳೂರು: ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಎಂ.ಉದಾಸಿ ಅವರ ನಿಧನಕ್ಕೆ ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಿ.ಎಂ.ಉದಾಸಿಯವರು ಸರಳ ಸಜ್ಜನಿಕೆಯ ವ್ಯಕ್ತಿತ್ವ ಉಳ್ಳ ಕ್ರಿಯಾಶೀಲ ರಾಜಕಾರಣಿ. ಈ ಹಿಂದೆ ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾದ ಕಾರ್ಯನಿರ್ವಹಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಜನಪ್ರಿಯ ನಾಯಕರಾಗಿದ್ದರು.
ಅವರ ನಿಧನದಿಂದ ಅಪರೂಪದ ಸಜ್ಜನಿಕೆಯ ನೇತಾರರೊಬ್ಬರನ್ನು ರಾಜ್ಯ ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಅವರ ಕುಟುಂಬದವರಿಗೆ ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಡಿಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.