ಕಾಂಗ್ರೆಸ್ ಎಂಎಲ್ಸಿ ಪುತ್ರ ಹೃದಯಾಘಾತದಿಂದ ಸಾವು
1 min readಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ ಪುತ್ರ ಸುಹಾಸ ಹೃದಯಾಘಾತದಿಂದ ನಿಧನರಾಗಿದ್ದಾರೆ.
31 ವರ್ಷದ ಸುಹಾಸ ಆರೋಗ್ಯವಾಗಿಯೇ ಇದ್ದರು.
ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರ ಪುತ್ರ ಸುಹಾಸ್ (31) ನಿಧನರಾಗಿದ್ದಾರೆ.
ಇಂದು (ಭಾನುವಾರ) ಹೃದಯಾಘಾತದಿಂದ ಮೃತರಾಗಿದ್ದಾರೆ. ಮುಂಜಾನೆ ಎದೆನೋವಿನಿಂದ ನಿತ್ರಾಣರಾಗಿ ಕುಸಿದು ಬಿದ್ದ ಸುಹಾಸ್ ರನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಎಂಎಲ್ಸಿ ಪುತ್ರ ಸುಹಾಸ್ ಕೊನೆಯುಸಿರೆಳೆದಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಎಂಎಲ್ಸಿ ಪ್ರಸನ್ನ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ. ಸುಹಾಸ್ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
ಪ್ರಸನ್ನ ಕುಮಾರ್ ಗೆ ಇಬ್ಬರು ಮಕ್ಕಳು ಸೂರಜ್ ಹಾಗೂ ಸುಹಾಸ್. ಮೂವತ್ತೊಂದು ವರ್ಷದ ಸುಹಾಸ್ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು.
ಇನ್ನು ಆರ್.ಪ್ರಸನ್ನ ಕುಮಾರ್, ಅವರು ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಗನ ಮುಖ ನೋಡಲಾದ ಪರಿಸ್ಥಿತಿಯಲ್ಲಿದ್ದಾರೆ.