“ಮಬ್ಬು” ಮುಗಿಸಿದ್ದವರನ್ನ ’48’ ಗಂಟೆಯಲ್ಲಿ ಹೆಡಮುರಿಗೆ ಕಟ್ಟಿದ ಹುಬ್ಬಳ್ಳಿಯ “SRನಾಯಕ” ಟೀಂ…
1 min readಕೊಲೆ ಆರೋಪಿಗಳನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬೆಂಡಿಗೇರಿ ಪೊಲೀಸ್
ಹುಬ್ಬಳ್ಳಿ: 27.12.2024 ರಂದು ಹುಬ್ಬಳ್ಳಿಯ ಮಂಟೂರ ರಸ್ತೆ ನಿವಾಸಿಯಾದ ಸ್ಯಾಮುಯಲ್ ಮಬ್ಬು ಎಂಬಾತನನ್ನು ಕೊಲೆ ಮಾಡಿ ಪರಾರಿಯಾಗಿ ಆರೋಪಿಗಳನ್ನ ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಪತ್ತೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿ ದಕ್ಷಿಣ ಉಪವಿಭಾಗದ ಎಸಿಪಿ ಉಮೇಶ್ ಚಿಕ್ಕಮಠ ರವರ ನೇತೃತ್ವದಲ್ಲಿ ಬೆಂಡಿಗೇರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ S.R ನಾಯಕ್ ಮತ್ತವರ ಠಾಣೆಯ ಅಧಿಕಾರಿ ಸಿಬ್ಬಂದಿಗಳನ್ನು ಒಳಗೊಂಡ ತಂಡವನ್ನು ರಚಿಸಲಾಗಿತ್ತು.
ಕೊಲೆ ಮಾಡಿ ಪರಾರಿಯಾಗಿದ್ದ ಸುಲೇಮಾನ್ ಬಳ್ಳಾರಿ, ಟೈಟಾಸ್ ಬಾಬು ವೆನ್ನಮ್ಮ, ಮಹ್ಮದಷಾ ಫಿರೋಜಾಬಾದ ಹಾಗೂ ಮೌಲಾಸಾಬ್ ರಮಜಾನವರ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಕೊಲೆಗೆ ಹಣಕಾಸಿನ ವ್ಯವಹಾರ ಮತ್ತು ಕೌಟುಂಬಿಕ ಕಲಹದ ವಿಷಯವಾಗಿ ಕೊಲೆ ನಡೆದಿರುವ ಬಗ್ಗೆ ವಿಚಾರಣೆ ವೇಳೆ ತಿಳಿದುಬಂದಿದ್ದು, ತನಿಖೆ ಮುಂದುವರಿಸಿದ್ದಾರೆ.
ಪ್ರಕರಣ ದಾಖಲಾದ 48 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವೈಖರಿಯನ್ನು ಪೋಲಿಸ್ ಆಯುಕ್ತ ಎನ್.ಶಶಿಕುಮಾರ್ ಶ್ಲಾಘಿಸಿದ್ದಾರೆ.