ಹುಬ್ಬಳ್ಳಿಯಲ್ಲಿ “ಹಂದಿ ವ್ಯಾಪಾರಿ”ಗೆ ಖಾರದ ಪುಡಿ ಎರಚಿ ಮನಬಂದಂತೆ ಕೊಚ್ಚಿ ಕೊಲೆ… ಕಮೀಷನರ್ ಹೇಳಿದ್ದೇನು…!?

ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಹಂದಿ ವ್ಯಾಪಾರಿಯನ್ನ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು
ಹುಬ್ಬಳ್ಳಿ: ಹುಬ್ಬಳ್ಳಿಯ ಹೊರ ವಲಯದ ಗದಗ ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
Exclusive videos….
38 ವರ್ಷದ ಸ್ಯಾಮ್ಯುಯಲ್ ಎಂಬಾತನೇ ಕೊಲೆಗೀಡಾದ ವ್ಯಕ್ತಿಯಾಗಿದ್ದು, ಈತ ಹಂದಿ ಸಾಕಾಣಿಕೆ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಗುರುವಾರ ರಾತ್ರಿ ಗದಗ ರಸ್ತೆಯಲ್ಲಿ ಸ್ಯಾಮ್ಯುಯಲ್ ಕಣ್ಣಿಗೆ ಖಾರದ ಪುಡಿಯನ್ನು ಎರಚಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಬೆಂಡಿಗೇರಿ ಠಾಣೆಯ ಇನ್ಸ್‌ಪೆಕ್ಟರ್ ನಾಯಕ್ ಅವರು ಶವವನ್ನು ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಕಮಿಷನರ್ ಎನ್ ಶಶಿಕುಮಾರ್ ಕೊಲೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಸ್ಯಾಮ್ಯುಯಲ್‌ನನ್ನು ಹಳೇ ದ್ವೇಷಕ್ಕಾ, ವ್ಯವಹಾರಕ್ಕೆ ಸಂಬಂಧ ಪಟ್ಟಿದ್ದಾ ಅಥವಾ ಅನೈತಿಕ ಸಂಬಂಧಕ್ಕೆ ಕೊಲೆ ಮಾಡಿದ್ದಾರಾ ಎಂಬ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.