ಹುಬ್ಬಳ್ಳಿಯ “ಗೋಲ್ಡನ್ ಹೈಟ್ಸ್ ಬಾರ್” ಪಾರ್ಕಿಂಗ್‌ನಲ್ಲಿ ಯುವಕನ ಇರಿದು ಹತ್ಯೆ…!!!

ಹುಬ್ಬಳ್ಳಿ: ವಾಣಿಜ್ಯನಗರಿಯ ಲಿಂಗರಾಜನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್‌ನ ಪಾರ್ಕಿಂಗ್ ಪ್ರದೇಶದಲ್ಲಿ 24 ವಯಸ್ಸಿನ ಯುವಕನನ್ನ ಹರಿತವಾದ ಆಯುಧಗಳಿಂದ ಹೊಡೆದು ಹತ್ಯೆ ಮಾಡಿರುವ ಪ್ರಕರಣ ನಡೆದಿದೆ.
ಹತ್ಯೆಯಾದ ಯುವಕನನ್ನ ಆಕಾಶ ವಾಲ್ಮೀಕಿ ಎಂದು ಗುರುತಿಸಲಾಗಿದ್ದು, ಮೂವರು ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.
ಘಟನಾ ಸ್ಥಳಕ್ಕೆ ವಿದ್ಯಾನಗರ ಠಾಣೆಯ ಪೊಲೀಸರು ಧಾವಿಸಿದ್ದು, ಕೊಲೆಗೆ ನಿಖರವಾದ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಹಳೇ ದ್ವೇಷ ಕಾರಣವಿರಬಹುದೆಂಬ ಊಹೆ ಮೂಡಿದ್ದು, ಸಮಗ್ರ ತನಿಖೆಯ ನಂತರ ಸತ್ಯಾಸತ್ಯತೆ ಹೊರಬರಬೇಕಿದೆ.