ಹುಬ್ಬಳ್ಳಿ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಯುವಕನನ್ನ “ಹತ್ಯೆಗೈದು ಸುಟ್ಟು ಹಾಕಿದ” ದುಷ್ಕರ್ಮಿಗಳು…

ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿಯೇ ಯುವಕನ ಭೀಕರ ಕೊಲೆ
ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿಯೇ ವ್ಯಕ್ತಿಯೊಬ್ಬನ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದಲ್ಲದೆ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಅಮಾನವೀಯ ಘಟನೆ ಇಂದು ಬೆಳ್ಳಿಗ್ಗೆ ಬೆಳಕಿಗೆ ಬಂದಿದೆ.
ನಿನ್ನೇ ತಡರಾತ್ರಿ ಸುಮಾರು 25 ರಿಂದ 30 ವರ್ಷದ ಯುವಕನನ್ನು ಕಾಂಗ್ರೆಸ್ ಪಕ್ಷದ ಕಚೇರಿಯ ಮುಂಭಾಗದಲ್ಲಿರುವ ರೈಲ್ವೇ ಜಾಗದಲ್ಲಿ ಪಾರ್ಟಿ ಮಾಡಲು ಬಂದಿದ್ದ ಸ್ನೇಹಿತರ ನಡುವೆ ಜಗಳ ಬೆಳೆದು ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತಪಟ್ಟ ವ್ಯಕ್ತಿ ಯಾರು ಎಂಬ ಮಾಹಿತಿ ಕಲೆ ಹಾಕಲು ಮುಂದಾಗುತ್ತಿದ್ದಾರೆ.