ಹುಬ್ಬಳ್ಳಿಯಲ್ಲಿ ಚಾಕು ಇರಿತ “ಮತ್ತೋರ್ವ”ನ ಹತ್ಯೆ…

Exclusive
ಹಳೇ ದ್ವೇಷದ ಹಿನ್ನೆಲೆ ಯುವಕನಿಗೆ ಚಾಕುವಿಂದ ಇರಿದು ಬರ್ಭರವಾಗಿ ಕೊಲೆ
ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ಮೂರು ಜನ ಯುವಕರು ಸೇರಿ ಕುಡಿದ ಮತ್ತಿನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಶನಿವಾರ ಮಧ್ಯರಾತ್ರಿ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಕಸಬಾಪೇಟ ಪೊಲೀಸ್ ಠಾಣಾ ವ್ಯಾಪ್ತಿಯ ಕಸಾಯಿ ಮೋಹಲ್ಲಾದಲ್ಲಿ ಶನಿವಾರ ಮಧ್ಯರಾತ್ರಿ ಹಳೇ ಹುಬ್ಬಳ್ಳಿಯ ಸದರಸೋಪಾ ನಿವಾಸಿ ಜಾಫರ್ ಇಮ್ತಿಯಾಜ್ ದಡೇಸೂರ ಎಂಬ ಯುವಕನಿಗೆ ಹಳೇ ದ್ವೇಷದ ಹಿನ್ನೆಲೆಯಲ್ಲಿ ಮೂರು ಜನ ಸೇರಿ ಚಾಕುವಿನಿಂದ ತೊಡೆಗೆ ಇರಿದು ಕೊಲೆಗೆ ಯತ್ನಿಸಿದ್ದಾರೆ.
ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದ ಜಾಫರ್ ನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಆತನ ಸ್ನೇಹಿತರು ಚಿಕಿತ್ಸೆಗಾಗಿ ಕರೆತಂದರು ಕೂಡಾ ಅತಿ ರಕ್ತಸ್ರಾವ ದಿಂದ ಜಾಫರ್ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹು-ಧಾ ಕಾನೂನು ಸುವ್ಯವಸ್ಥೆ ಡಿಸಿಪಿ ಶಾಹಿಲ್ ಬಾಗ್ಲಾ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಕೊಲೆಗೀಡಾದ ಯುವಕನ ತಮ್ಮನಿಂದ ಹೆಚ್ಚಿನ ಮಾಹಿತಿಯನ್ನು ಪಡೆದಿದ್ದಾರೆ,ಸದ್ಯ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಕೊಲೆ ಮಾಡಿ ಪರಾರಿಯಾಗಿರುವ ಮೂವರ ಪತ್ತೆಗೆ ಮುಂದಾಗಿದ್ದಾರೆ.