ನರೇಂದ್ರದಲ್ಲಿ ಸಹೋದರನ ಕೊಲೆ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಆಸ್ತಿಗಾಗಿ ಸಹೋದರನನ್ನೇ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದ 2ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿತರಿಬ್ಬರಿಗೆ ಜೀವಾವಧಿ ಶಿಕ್ಷೆ ಹಾಗೂ 10ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ 2015ರ ನವೆಂಬರ್ 31ರಂದು ಈರಪ್ಪ ಮಡಿವಾಳೆಪ್ಪ ದೇಶಣ್ಣನವರ ಎಂಬಾತನನ್ನ ಆತನ ಸಹೋದರರಾದ ಶೇಖಪ್ಪ ದೇಶಣ್ಣನವರ ಹಾಗೂ ಈರಣ್ಣ ದೇಶಣ್ಣನವರ ಕೂಡಿಕೊಂಡು ಕೊಯಿತಾ ಹಾಗೂ ಸೈಕಲ್ ಚೈನದಿಂದ ಹೊಡೆದು ಕೊಲೆ ಮಾಡಿದ್ದರು.
ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಿಸಿಕೊಂಡು ಜಾರ್ಜಸೀಟ್ ಸಲ್ಲಿಸಿದ ನಂತರ ವಿಚಾರಣೆ ವೇಳೆಯಲ್ಲಿ ಕೊಲೆ ಮಾಡಿರುವ ಆರೋಪ ಸಾಭೀತಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಪಂಚಾಕ್ಷರಿ ಎಂ, ಅವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿ ಆದೇಶ ಹೊರಡಿಸಿದ್ದಾರೆ.
ಸರಕಾರದ ಪರವಾಗಿ ಸರೋಜಾ ಹೊಸಮನಿ ಅವರು ವಾದವನ್ನ ಮಂಡಿಸಿದ್ದರು.