ಕೂಡನಹಳ್ಳಿ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷ: ಮನೆ ಹೊರಗೆ ಬಾರದ ಜನ

ಮೈಸೂರು: ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಕಳೆದ ಮೂರು ದಿನಗಳ ಹಿಂದೆ ಹೊನ್ನಪ್ಪ ಎಂಬುವವರ ಗದ್ದೆಯಲ್ಲಿ ಕಾಣಿಸಿಕೊಂಡಿದ್ದ ಮೂರು ಚಿರತೆ ಮರಿಗಳು. ನಿನ್ನೆ ಮದ್ಯಾಹ್ನ ವೇಳೆ ಕಾಣಿಸಿಕೊಂಡಿರುವ ಚಿರತೆ. ಸಂಜೆ ವೇಳೆ ಮನೆಯಿಂದ ಹೊರಬರಲು ಹೆದರುತ್ತಿರುವ ಗ್ರಾಮಸ್ಥರು. ಕೂಡನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಹೆಚ್ಚಿದ್ದು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.