Posts Slider

Karnataka Voice

Latest Kannada News

ವೇದಿಕೆಯಲ್ಲಿ “ಪ್ರಧಾನಿ ಮೋದಿ ಜೊತೆಗೆ ಶೆಟ್ಟರ್‌” ಇರ್ತಾರೆ: ಸಚಿವ ನಾರಾಯಣಗೌಡ..

1 min read
Spread the love

ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗೆ ಕ್ಷಣಗಣನೆ- ಪ್ರಧಾನಿ ಮೋದಿಯವರ ಆಗಮನ, ರಾಜ್ಯದ ಯುವ ಜನರಿಗೆ ಪ್ರೇರಣೆ: ಸಚಿವ ಡಾ.ನಾರಾಯಣಗೌಡ

ಧಾರವಾಡ: 26ನೇ ರಾಷ್ಟ್ರೀಯ ಯುವ ಜನೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ರೇμÉ್ಮ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಧಾರವಾಡದ ಸಕ್ರ್ಯೂಟ್ ಹೌಸ್‍ನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು, ಪ್ರಧಾನ ಮಂತ್ರಿ ಆಗಮನ ರಾಜ್ಯದ ಯುವ ಜನತೆಗೆ ದೊಡ್ಡ ಪ್ರೇರಣೆಯಾಗಲಿದೆ ಎಂದು ತಿಳಿಸಿದರು.

ನಾಳೆ ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನ ಮೋದಿಯವರ ಜೊತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಅನುರಾಗ್ ಸಿಂಗ್ ಠಾಕೂರ್, ನಿಶಿತ್ ಪ್ರಮಾಣಿಕ್, ಸಭಾಪತಿ ಬಸವರಾಜ ಹೊರಟ್ಟಿ, ಜಗದೀಶ್ ಶೆಟ್ಟರ್ ಸೇರಿದಂತೆ ವೇದಿಕೆ ಮೇಲೆ 22 ಗಣ್ಯರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಮಾಹಿತಿ ನೀಡಿದರು.

ಐದು ದಿನಗಳ ಕಾಲ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು, ಆಹಾರ ಮೇಳ ಸೇರಿದಂತೆ ಹತ್ತಾರು ಕಾರ್ಯಕ್ರಮ ಆಯೋಜಿಸಲಾಗಿದೆ. ನಾಳೆ ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಸಂಗೀತ ಸಂಜೆ ಇರಲಿದೆ. ಈಗಾಗಲೇ ದೇಶದ ನಾನಾ ಭಾಗಗಳಿಂದ 6 ಸಾವಿರಕ್ಕೂ ಹೆಚ್ಚು ಜನರು ಆಗಮಿಸಿದ್ದಾರೆ. ನಾಳೆಯ ಕಾರ್ಯಕ್ರಮಕ್ಕೆ 50 ಸಾವಿರ ಜನರು ರಿಜಿಸ್ಟರ್ ಮಾಡಿಸಿದ್ದಾರೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಯಶಸ್ವಿಗೊಳಿಸಿದ್ದಕ್ಕೆ ಮತ್ತೆ ನಮಗೆ ಈ ಅವಕಾಶ ಕೊಟ್ಟಿದ್ದಾರೆ. ರಾಷ್ಟ್ರೀಯ ಯುವ ಜನೋತ್ಸವವನ್ನು ಧಾರವಾಡದಲ್ಲಿ ಆಯೋಜಿಸಿರುವುದು ಖುಷಿ ತಂದಿದೆ. ಮೈದಾನ, ವಸತಿ ವ್ಯವಸ್ಥೆಗೆ ಎಲ್ಲಾ ರೀತಿಯ ವ್ಯವಸ್ಥೆ ಇಲ್ಲಿದೆ. ಇದರಿಂದ ಕಾರ್ಯಕ್ರಮ ಯಶಸ್ವಿಗೊಳಿಸಲು ಅನುಕೂಲ ಆಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಜನವರಿ 15 ರಂದು ರಾಜ್ಯಾದ್ಯಂತ ಯೋಗಥಾನ್ ನಡೆಯಲಿದೆ. ಅಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಸುದ್ಧಿಗೋಷ್ಠಿ ಬಳಿಕ ಸಚಿವ ಡಾ.ನಾರಾಯಣಗೌಡ ಅವರು, ಕೆಸಿಡಿ ಮೈದಾನಕ್ಕೆ ತೆರಳಿ ಸಾಂಸ್ಕøತಿಕ ಕಾರ್ಯಕ್ರಮಗಳ ವೇದಿಕೆ, ಫುಡ್ ಕೋರ್ಟ್ ಸೇರಿದಂತೆ ಹಲವು ಸ್ಥಳಗಳಿಗೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು.


Spread the love

Leave a Reply

Your email address will not be published. Required fields are marked *