ದೇಶದ ಮೊಟ್ಟ ಮೊದಲ ಮಿನಿ ಒಲಂಪಿಕ್ಸ್ ಬೆಂಗಳೂರಲ್ಲಿ ಪೆಬ್ರುವರಿ 3ರಿಂದ ಆರಂಭ

ಬೆಂಗಳೂರು: ದೇಶದಲ್ಲಿ ಎಲ್ಲಿಯೂ ನಡೆಯದ ಮಿನಿ ಒಲಂಪಿಕ್ಸ್ ಕ್ರೀಡಾಕೂಟವನ್ನ ಬೆಂಗಳೂರಿನಲ್ಲಿ ಆಯೋಜನೆ ಮಾಡಲು ರಾಜ್ಯ ಸರಕಾರ ಮುಂದಾಗಿದ್ದು, ಬರುವ ಫೆಬ್ರುವರಿ 3ರಿಂದ 9ರ ವರೆಗೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿವೆ.
ಈ ಕುರಿತು ಮಾಹಿತಿ ನೀಡಿದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಎಸ್.ಈಶ್ವರಪ್ಪ, ಕ್ರೀಡಾಕೂಟಕ್ಕೆ ಸರಕಾರ 2ಕೋಟಿ ರೂಪಾಯಿ ನೀಡಲಿದೆ. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 4ಸಾವಿರ ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆಯನ್ನ ಹೊಂದಲಾಗಿದೆ ಎಂದರು.
ಮಿನಿ ಒಲಂಪಿಕ್ಸ್ ಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಕಂಠೀರವ ಹೊರಾಂಗಣ, ಒಳಾಂಗಣ ಕ್ರೀಡಾಂಗಣ, ಕೋರಮಂಗಲ ಒಳಾಂಗಣ ಕ್ರೀಡಾಗಣ, ವಿದ್ಯಾನಗರದ ಸುತ್ತಮುತ್ತ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ಸ್ಪರ್ಧೆಗಳು ನಡೆಯುವ ಸ್ಥಳಕ್ಕೆ ಹೋಗಲು ಉಚಿತ ಸಾರಿಗೆ ವ್ಯವಸ್ಥೆಯನ್ನ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನ ಸಚಿವರು ನೀಡಿದ್ರು.