ನವಲಗುಂದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಭೆ: ಸಾರ್ವಜನಿಕರಿಗಾಗಿ ಕೆಲಸ ಮಾಡುವಂತೆ ಖಡಕ್ ಆದೇಶ

ಧಾರವಾಡ: ಜಿಲ್ಲೆಯ ನವಲಗುಂದ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅಧಿಖಾರಿಗಳ ಸಭೆ ನಡೆಸಿ, ಲಾಕ್ ಡೌನ್ ಸಮಯದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಎಚ್ಚರಿಕೆ ವಹಿಸಬೇಕೆಂದು ಸಚಿವ ಜಗದೀಶ ಶೆಟ್ಟರ ಸೂಚನೆ ನೀಡಿದರು.
ನವಲಗುಂದ ಕ್ಷೇತ್ರದಲ್ಲಿ ಕ್ವಾರಂಟೈನ್ ಗೆ ಒಳಗಾಗಿರುವ ಜನರ ಬಗ್ಗೆಯೂ ಜಾಗೃತೆ ವಹಿಸಬೇಕು. ರೈತಾಪಿ ಜನರಿಗೆ ಯಾವುದೇ ರೀತಿಯಲ್ಲಿ ತೊಂದರೆ ಕೊಡಬೇಡಿ. ಅವರ ಕೆಲಸಗಳಿಗೆ ಹೋಗಲು ಅನುಮತಿ ಕೊಡಿ ಎಂದರು.
ಇದೇ ಸಮಯದಲ್ಲಿ ಹಾಜರಿದ್ದ ಶಾಸಕ ಶಂಕರ ಪಾಟೀಲಮುನೇನಕೊಪ್ಪ ಮಾತನಾಡಿ, ಕೆಲವು ಮಾಹಿತಿಗಳನ್ನ ನೀಡಿದರು. ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ ಭಾಗವಹಿಸಿದ್ದರು.