ನೈಟ್ ಕರ್ಪ್ಯೂಗೆ ಕೆಲವೇ ನಿಮಿಷಗಳು ಬಾಕಿ… ಹುಬ್ಬಳ್ಳಿ-ಧಾರವಾಡದಲ್ಲಿ ಪೊಲೀಸರ ಗಸ್ತು ಶುರು…!
1 min readಹುಬ್ಬಳ್ಳಿ: ಕೋವಿಡ್ ಸಾಂಕ್ರಾಮಿಕ ರೋಗ ಹರಡದಂತೆ ಜಾಗೃತೆ ವಹಿಸಲು ರಾಜ್ಯ ಸರಕಾರ ಇಂದಿನಿಂದ ಹತ್ತು ದಿನಗಳವರೆಗೆ ರಾತ್ರಿ ಹತ್ತು ಗಂಟೆಯಿಂದ ಬೆಳಗಿನವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಿದ್ದು, ಅವಳಿನಗರದಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.
ವೈಜ್ಞಾನಿಕ ದೃಷ್ಟಿಕೋನದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಿದ್ದೇವೆ. ಈಗಾಗಲೇ ಘೋಷಣೆ ಮಾಡಿದಂತೆ 10 ದಿನಗಳ ಕಾಲ ರಾತ್ರಿ ಕರ್ಫ್ಯೂ ಇರಲಿದೆ. ಹೋಟೆಲ್, ಬಾರ್, ಪಬ್ ಇತ್ಯಾದಿಗಳು ಯಾವುದೇ ಚಟುವಟಿಕೆ ನಡೆಸುವಂತಿಲ್ಲ. ಇದಕ್ಕೆ ಜನರು ಸಹ ಸಹಕಾರ ನೀಡಬೇಕು ಎಂದು ಸರಕಾರ ಮನವಿ ಮಾಡಿಕೊಂಡಿದ್ದನ್ನ ಪೊಲೀಸರು ಸಾರ್ವಜನಿಕರಿಗೆ ತಿಳಿಸುವ ಪ್ರಯತ್ನವನ್ನ ಮಾಡುತ್ತಿದ್ದರು.
ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮ ಅನಿವಾರ್ಯ. ರಾತ್ರಿ ಕರ್ಫ್ಯೂ ಜೊತೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕಿದೆ. ಕರ್ನಾಟಕ ಒಂದೇ ಅಲ್ಲದೆ, ದೇಶದ ಇತರ ರಾಜ್ಯಗಳಲ್ಲಿಯೂ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಎರಡು ಡೋಸ್ ತೆಗೆದುಕೊಳ್ಳದೇ ಇರೋರಿಗೆ ಪ್ರವೇಶವಿಲ್ಲವೆಂದು ಈಗಾಗಲೇ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.
ಅವಳಿನಗರದಲ್ಲಿ ಪೊಲೀಸರು ತಮ್ಮ ವಾಹನದಲ್ಲಿ ಸಾರ್ವಜನಿಕರಿಗೆ ಸೂಚನೆ ಕೊಡುತ್ತ, ಅಂಗಡಿ ಮುಗ್ಗಟ್ಟುಗಳನ್ನ ಬಂದ್ ಮಾಡುವಂತೆ ಆದೇಶ ನೀಡುತ್ತಿದ್ದಾರೆ.