ಮುಡಾ ಕೇಸ್: ನವೆಂಬರ್ 6ರೊಳಗೆ ವಿಚಾರಣೆಗೆ ಹಾಜರಾಗುವಂತೆ “ಸಿಎಂ”ಗೆ ಲೋಕಾಯುಕ್ತ ನೋಟೀಸ್…

ಮೈಸೂರು : ಮುಡಾ ಸೈಟ್ ಹಗರಣದ ತನಿಖೆ ಚುರುಕಗೊಂಡಿದೆ. ಪ್ರಕರಣದಲ್ಲಿ A2 ಆಗಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನ ಲೋಕಾಯುಕ್ತ ಅಧಿಕಾರಿಗಳು ಮೊನ್ನೆ ವಿಚಾರಣೆ ಮಾಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಂಯ್ಯನವರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.

ಈಗಾಗಲೇ ಲೋಕಾಯುಕ್ತ ಎಲ್ಲಾ ಆರೋಪಿಗಳ ವಿಚಾರಣೆ ಮುಗಿಸಿದ್ದು, ಸಿದ್ದರಾಮಯ್ಯನವರ ವಿಚಾರಣೆಯೊಂದೇ ಬಾಕಿ ಇತ್ತು. ಇದೀಗ ನವೆಂಬರ್ 6ರೊಳಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ರಿಂದ ನೋಟಿಸ್ ಜಾರಿಯಾಗಿದೆ.