“ಕೈ ಸಾಲಗಾರರ ಕಿರುಕುಳ” ನುಗ್ಗಿಕೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ನಾಗರಾಜ…

ಧಾರವಾಡ: ನುಗ್ಗಿಕೇರಿಯ ಆಂಜನೇಯ ದೇವಸ್ಥಾನದ ಬಳಿ ಹಣ್ಣು-ಕಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವ ಸಾಲಗಾರರ ಕಾಟದಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ನಾಗರಾಜ ಬಂಡಿ ಎಂಬಾತನೇ ಸಾವಿಗೀಡಾದ ದುರ್ದೈವಿಯಾಗಿದ್ದು, ನಾಲ್ಕು ಹೆಣ್ಣು ಮಕ್ಕಳನ್ನ ಬಿಟ್ಟು ಅಗಲಿದ್ದಾನೆ. ದೇವಸ್ಥಾನದ ಮುಂದೆ ವ್ಯಾಪಾರ ಮಾಡಿದ್ದರೂ, ಸಾಲ ತೀರಿಸಲು ಆಗಿರಲಿಲ್ಲ.
ನಿರಂತರ ಕಿರುಕುಳ ಆರಂಭವಾಗಿದ್ದರಿಂದ ಬೇಸತ್ತ ನಾಗರಾಜ, ವಿಷ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ. ಆತನನ್ನು ಕಿಮ್ಸಗೆ ರವಾನೆ ಮಾಡಲಾಗಿತ್ತಾದರೂ, ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾನೆ.
ಪ್ರಕರಣದ ಕುರಿತು ಮಾಹಿತಿ ಪಡೆದುಕೊಂಡು ಪೊಲೀಸರು ಮುಂದಿನ ಕ್ರಮ ಜರುಗಿಸಲಿದ್ದಾರೆ.