ಪೆಂಗಲ್ ಚಂಡಮಾರುತ- ನಾಳೆ “ಪ್ರಮುಖ” ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ…!!!
1 min readಜಿಲ್ಲಾಧಿಕಾರಿಗಳ ಆದೇಶ
ಕೋಲಾರ: ಫೆಂಗಲ್ ಚಂಡಮಾರುತದ ಹಿನ್ನಲೆಯಲ್ಲಿ ನಾಳೆ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಅಕ್ರಂ ಪಾಷಾ ಅವರು ಆದೇಶ ಹೊರಡಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ನಾಳೆ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ನಾಳಿನ ರಜೆಯನ್ನು ಮತ್ತೊಂದು ರಜಾ ದಿನಗಳಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶದಲ್ಲಿ ತಿಳಿಸಿದ್ದಾರೆ.