ವಿದ್ಯಾರ್ಥಿಗಳ ಪಾಕ್ ಪರ ಘೋಷಣೆ: ಜಾಮೀನು ಸಿಕ್ಕ ಬೆನ್ನಲ್ಲೇ ಅಮಾನತ್ತಾದ ಸರ್ಕಲ್ ಇನ್ಸ್ ಪೆಕ್ಟರ್ ಡಿಸೋಜಾ: ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಬಲಿ
ಹುಬ್ಬಳ್ಳಿ: ಕೆಎಲ್ ಇ ಇಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿ ಜೈಲು ಪಾಲಾಗಿದ್ದವರಿಗೆ ಜಾಮೀನು ಸಿಕ್ಕಿದೆ. ಇದಕ್ಕೆ ಕಾರಣವಾಗಿದ್ದು, ತಡವಾಗಿ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದ್ದಾಗಿದೆ. ಜಾರ್ಜಶೀಟ್ ಹಾಕಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಜಾಕ್ಸನ್ ಡಿಸೋಜಾರನ್ನ ಅಮಾನತ್ತು ಮಾಡಿ, ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಆದೇಶ ಹೊರಡಿಸಿದ್ದಾರೆ.
ಪಾಕಿಸ್ತಾನ ಪರ ಘೋಷಣೆ ಕೂಗಿದ ಕೆಎಲ್‌ಇ ಎಂಜಿನಿಯರಿಂಗ್ ಕಾಲೇಜ್‌ನ ಬಾಸೀತ ಸೋಪಿ (19), ತಾಲೀಬ ವಾನಿ ಅಮೀರ(19), ಮೊಯಿನುದ್ದೀನ್ ವಾನಿ (21). 90 ದಿನದ ಒಳಗೆ ದೋಷಾರೋಪಣೆ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳಿಗೆ ಜೂನ್- 6 ರಂದು ಜಾಮೀನು ಸಿಕ್ಕಿದೆ
ಈ ಹಿಂದೆಯೂ ಪ್ರಕರಣದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ ಪ್ರಮಾದ ಎಸಗಿದ್ದಾರೆಂದು ಹಲವರು ಆರೋಪ ಮಾಡಿದ್ದರು. ಪ್ರಕರಣ ಹುಬ್ಬಳ್ಳಿ ಗ್ರಾಮೀಣಕ್ಕೆ ವರ್ಗಾವಣೆಗೊಂಡ ನಂತರ ಡಿಸೋಜಾ ಮೇಲೆ ಅಸ್ತ್ರ ಬೀಸಿದಂತಾಗಿದೆ.