ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಮುಂದೂಡಿಕೆ: ಆಯುಕ್ತರ ಆದೇಶ
ಹುಬ್ಬಳ್ಳಿ: ನಾಳೆಯಿಂದ ಮೂರು ದಿನಗಳವರೆಗೆ ನಡೆಯಬೇಕಾಗಿದ್ದ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನ ಮುದೂಡಿ ಆದೇಶ ಹೊರಡಿಸಲಾಗಿದೆ.
ನಾಳೆಯಿಂದ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದಲ್ಲಿ ನಡೆಯಬೇಕಾಗಿದ್ದ ಪರೀಕ್ಷೆಯನ್ನ ರದ್ದು ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ನಾಳೆಯಿಂದ 24ರ ವರೆಗೆ ಲಾಕ್‌ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಮುಂದಿನ ದಿನಾಂಕವನ್ನ ಮತ್ತೆ ತಿಳಿಸಲಾಗುವುದೆಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.