Posts Slider

Karnataka Voice

Latest Kannada News

ಧಾರವಾಡ: ಶಹರದಲ್ಲಿ 320, ಗ್ರಾಮೀಣದಲ್ಲಿ 236 ಆರೋಪಿತರ ಬಂಧನ- ಬಿಗ್ ರೇಡ್…

1 min read
Spread the love

ಧಾರವಾಡ: ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ನಡೆದ ಅಂದರ್-ಬಾಹರ್ ವೇಳೆಯಲ್ಲಿ ಪೊಲೀಸರು ದಾಳಿ ಮಾಡಿ ನೂರಾರೂ ಜನರನ್ನ ಬಂಧಿಸಿ, ಕಾನೂನು ಕ್ರಮ ಜರುಗಿಸಿದ್ದಾರೆ.

ಕಮೀಷನರೇಟ್ ವ್ಯಾಪ್ತಿಯಲ್ಲಿ ನಡೆದ ದಾಳಿಯ ವಿವರ…

ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಲ್ಲಿ ಜೂಜಾಟ ಆಡುವವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಜೂಜಾಟ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ, 14.11.2023 ರಂದು ಒಟ್ಟು 47 ಪ್ರಕರಣಗಳನ್ನು ದಾಖಲಿಸಿ 320 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ ಒಟ್ಟು 6,49,880/- ರೂ ನಗದು, ಮೊಬೈಲ್ ಫೋನ್‌ಗಳು ಸೇರಿದಂತೆ ಇನ್ನಿತರ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಪ್ರಕರಣಗಳ ವಿವರ…

1. ಸಿಸಿಬಿ ಘಟಕದಿಂದ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ 01, ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ 01, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ 01 ಹಾಗೂ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ 01, ಒಟ್ಟು 04 ಜೂಜಾಟ ಪ್ರಕರಣಗಳನ್ನು ದಾಖಲಿಸಲಾಗಿದ್ದು, 53 ಜನ ಆರೋಪಿಗಳನ್ನು ಬಂಧಿಸಿ 2,28,490/- ರೂ ನಗದು, ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

2. ಉತ್ತರ ಉಪವಿಭಾಗದ ಅಶೋಕನಗರ ಪೊಲೀಸ್ ಠಾಣೆಯಲ್ಲಿ 05, ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ 04, ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ 04, ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ 04, ಕೇಶ್ವಾಪುರ ಪೊಲೀಸ್‌ ಠಾಣೆಯಲ್ಲಿ 03, ಉಪನಗರ ಪೊಲೀಸ್‌ ಠಾಣೆಯಲ್ಲಿ 03, ಒಟ್ಟು 23 ಜೂಜಾಟ ಪ್ರಕರಣಗಳನ್ನು ದಾಖಲಿಸಲಾಗಿದ್ದು, 147 ಜನ ಆರೋಪಿಗಳನ್ನು ಬಂಧಿಸಿ 1,84,210/- ರೂ ನಗದು, ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

3. ದಕ್ಷಿಣ ಉಪವಿಭಾಗದ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ 03, ಹಳೇಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ 03, ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ 02, ಗಂಟಿಕೇರಿ ಪೊಲೀಸ್ ಠಾಣೆಯಲ್ಲಿ 01, ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ 01, ಒಟ್ಟು 10 ಜೂಜಾಟ ಪ್ರಕರಣಗಳನ್ನು ದಾಖಲಿಸಲಾಗಿದ್ದು, 60 ಜನ ಆರೋಪಿಗಳನ್ನು ಬಂಧಿಸಿ 68,070/- ನಗದು, ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

4. ಧಾರವಾಡ ಉಪವಿಭಾಗದ ಉಪನಗರ ಪೊಲೀಸ್ ಠಾಣೆಯಲ್ಲಿ 02, ಶಹರ ಪೊಲೀಸ್ ಠಾಣೆಯಲ್ಲಿ 04, ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ 04, ಒಟ್ಟು 10 ಜೂಜಾಟ ಪ್ರಕರಣಗಳನ್ನು ದಾಖಲಿಸಲಾಗಿದ್ದು, 60 ಜನ ಆರೋಪಿಗಳನ್ನು ಬಂಧಿಸಿ 1,69,110/- ರೂ ನಗದು, ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜೂಜಾಟ ಪ್ರಕರಣ ದಾಖಲಿಸುವಲ್ಲಿ ವಿಶೇಷ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಸಿಬ್ಬಂದಿಗಳನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿರುತ್ತಾರೆ.

ಧಾರವಾಡ ಜಿಲ್ಲೆಯ ವಿವರ…

ಧಾರವಾಡ ಜಿಲ್ಲಾ ಗ್ರಾಮೀಣ ಭಾಗದಲ್ಲಿ ಒಟ್ಟು 27 ಪ್ರಕರಣಗಳನ್ನ ದಾಖಲು ಮಾಡಿ, 236 ಆರೋಪಿತರನ್ನ ಬಂಧನ ಮಾಡಲಾಗಿದೆ. ಇವರುಗಳಿಂದ 3.38 ಲಕ್ಷ ರೂಪಾಯಿ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಬ್ಯಾಹಟ್ಟಿ, ಕೊಡಗೊಂಡಹುಣಸಿ ಹಾಗೂ ಅದರಗುಂಚಿಯಲ್ಲಿ ದಾಳಿ ಮಾಡಿ 25 ಜೂಜುಕೋರರನ್ನ ಬಂಧಿಸಿ, ಅವರಿಂದ 82ಸಾವಿರ ರೂಪಾಯಿ ವಶಕ್ಕೆ ಪಡೆಯಲಾಗಿದೆ.

 

 


Spread the love

Leave a Reply

Your email address will not be published. Required fields are marked *