ಇನ್ಸಪೆಕ್ಟರ್ ಶಿವಾನಂದ ಕಮತಗಿ ಟೀಂ “ವರ್ಕೌಟ್”- ಬಲೆಗೆ ಬಿದ್ದ ಮೂವರು ಅಂತರ್ ರಾಜ್ಯ ಕಳ್ಳರು…

ಧಾರವಾಡ: ಮೊಬೈಲ್ ಟವರ್ನ ರೆಡಿಯೋ ಹೆಡ್ ಕದಿಯುತ್ತಿದ್ದ ಮೂವರು ಕಳ್ಳರನ್ನ ಬಂಧನ ಮಾಡುವಲ್ಲಿ ಧಾರವಾಡ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಶಿವಾನಂದ ಕಮತಗಿ ತಂಡ ಯಶಸ್ವಿಯಾಗಿದೆ.
ಆರೋಪಿಗಳಿಂದ 4 ರೆಡಿಯೋ ಹೆಡ್ ಹಾಗೂ ಬೈಕ್ವೊಂದನ್ನ ವಶಕ್ಕೆ ಪಡೆಯಲಾಗಿದೆ. ಇವುಗಳ ಅಂದಾಜು ಮೊತ್ತ 310000 ಎಂದು ಗುರುತಿಸಲಾಗಿದೆ.
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.