Posts Slider

Karnataka Voice

Latest Kannada News

ಪ್ರಲ್ಹಾದ ಜೋಶಿಯವರ ಬ್ಯಾನರ್ ಕಟ್ಟಲು ಹೋದ ಇಸ್ಮಾಯಿಲ ದುರ್ಮರಣ- ಬದುಕುಳಿದ ಪ್ರಕಾಶ…

1 min read
Spread the love

ಕೇಂದ್ರ ಸಚಿವರ ಕಾರ್ಯಕ್ರಮದ ಬ್ಯಾನರ್ ಕಟ್ಟಲು ಹೋಗಿ ಕರೆಂಟ್ ಶಾಕ್ ಓರ್ವ ದುರ್ಮರಣ ಇನ್ನೊಬ್ಬನ ಸ್ಥಿತಿ ಗಂಭೀರ

ಹುಬ್ಬಳ್ಳಿ: ಕೇಂದ್ರ ಸಚಿವರ ಕಾರ್ಯಕ್ರಮದ ಬ್ಯಾನರ್ ಕಟ್ಟಲು ಹೋಗಿ ಇಬ್ಬರು ಕಾರ್ಮಿಕರಿಗೆ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಓರ್ವ ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ.

ಹೌದು.. ನಾಳೆ ಕುಂದಗೋಳ ಪಟ್ಟಣದ ಶ್ರೀ ಹರಭಟ್ಟ ಹೈಸ್ಕೂಲ್ ಮೈದಾನದಲ್ಲಿ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಬಣ್ಣದರ್ಪಣೆ ಎಂಬ ಶೀರ್ಷಿಕೆ ಅಡಿಯಲ್ಲಿ ಬಣ್ಣ ಹಚ್ಚುವ ಅಭಿಯಾನವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯ ಸಭಾ ಸದಸ್ಯ ಜಗ್ಗೇಶ ಸೇರಿದಂತೆ ಹಲವು ಗಣ್ಯಾತೀಗಣ್ಯರು ಭಾಗಿಯಾಗಲಿದ್ದರು.

ಇದೇ ಕಾರ್ಯಕ್ರಮದ ಪ್ರಚಾರದ ಬ್ಯಾನರ್ ಗಳನ್ನು ಕುಂದಗೋಳ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಕಟ್ಟುವ ಕೆಲಸ ಮಾಡುತ್ತಿದ್ದಾಗ ಗುಡೇನಕಟ್ಟಿ ಗ್ರಾಮದಲ್ಲಿ ಕರೆಂಟ್ ಶಾಕ್ ತಗುಲಿ ಬಸಾಪುರ ಗ್ರಾಮದ ಇಸ್ಮಾಯಿಲ್ ಒಗ್ಗರಣಿ ಎಂಬಾತ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೊಬ್ಬ ಪ್ರಕಾಶ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕುಂದಗೋಳ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೋಲಿಸರು ಘಟನೆ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed