ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೂ ಕೊರೋನಾ ಪಾಸಿಟಿವ್
 
        ಹುಬ್ಬಳ್ಳಿ: ಕಳೆದ ಎರಡು ದಿನಗಳಿಂದ ರಾಯಚೂರು ಮತ್ತು ಬೆಳಗಾವಿ ಪ್ರವಾಸ ಮುಗಿಸಿಕೊಂಡು ಬಂದ ನಂತರ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಬಗ್ಗೆ ಅವರೇ ತಮ್ಮ ವಿಷಯವನ್ನ ಫೇಸಬುಕನಲ್ಲಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಪ್ರಲ್ಹಾದ ಜೋಶಿ, ಬರೆದುಕೊಂಡಿದ್ದು.. ಆತ್ಮೀಯರೇ ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈಧ್ಯರ ಸಲಹೆಯಂತೆ ಹೋಂ ಕ್ವಾರಂಟೈನ್ ಆಗಿದ್ದೇನೆ..
ಪ್ರಹ್ಲಾದ್ ಜೋಶಿ ನಿನ್ನೆಯಷ್ಟೆ ಬೆಳಗಾವಿಗೆ ಬಂದು ಹೋಗಿದ್ದಾರೆ. ಈಚೆಗೆ ನಿಧನಾಗಿರುವ ಕೇಂದ್ರ ಸಚಿವ ಸುರೇಶ ಅಂಗಡಿ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಹೋಗಿದ್ದಾರೆ.
ನಂತರ ಪತ್ರಿಕಾಗೋಷ್ಠಿಯನ್ನೂ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮೊದಲಾದವರಿದ್ದರು. ಈಗ ಎಲ್ಲರಿಗೂ ಆತಂಕ ಶುರುವಾಗಿದೆ.
 
                       
                       
                       
                       
                      
 
                        
 
                 
                 
                