Posts Slider

Karnataka Voice

Latest Kannada News

ಡ್ರೀಲ್ ಮಾಡಬೇಕಾಗಿರೋದು ಪೊಲೀಸರಲ್ಲ; CM, HMಗೆ ಡ್ರೀಲ್ ಆಗಬೇಕಿದೆ ಎಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ…

1 min read
Spread the love

ಡ್ರೀಲ್ ಮಾಡಬೇಕಾಗಿರೋದು CM ಹಾಗೂ HOME ಮಿನಿಸ್ಟರ್’ಗೆ; ಪೋಲಿಸರಿಗಲ್ಲ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಹೋಂ ಮಿನಿಸ್ಟರ್ ಜಿ ಪರಮೇಶ್ವರ ಅವರು ಪೊಲೀಸರು ಇನ್ನ ಮೇಲಿಂದ ಪ್ರತಿ ಎರಡು ಗಂಟೆಗೊಮ್ಮೆ ಕರ್ತವ್ಯ ನಿರ್ವಹಿಸುವ ಸ್ಥಳದಲ್ಲಿಯೇ ಡ್ರೀಲ್ ಮಾರ್ಚ್ ಮಾಡುವ ಹೊಸ ನಿಯಮದ ವಿರುದ್ಧ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

Video

ಮೊದಲೇ ರಾಜ್ಯದಲ್ಲಿ ಪೊಲೀಸರ ಸಂಖ್ಯೆ ಕಡಿಮೆ ಇದೆ ಈ ನಡುವೆ ಪೊಲೀಸರ ಆತ್ಮಸ್ಥೈರ್ಯ ಕಡಿಮೆ ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ.ಪೊಲೀಸರಿಗೆ ಡ್ರೀಲ್ ಮಾಡುವ ಬದಲು ಸಿಎಂ ಸಿದ್ದರಾಮಯ್ಯ ಹಾಗೂ ಹೋಮ್ ಮಿನಿಸ್ಟರ್ ಗೆ ಡ್ರೀಲ್ ಮಾಡಬೇಕು ಅಂತಾ ಹೇಳಿದರು.

ಡ್ರಗ್ಸ್ ಪ್ರಕರಣದಲ್ಲಿ ಮುಂದೆ ಪಂಜಾಬ್ ಮೀರಿಸಬಹುದು ಕರ್ನಾಟಕ

 ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಳವಳ

-ಡ್ರಗ್ಸ್, ಗಾಂಜಾ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಬೇಜವಾಬ್ದಾರಿ

ಹುಬ್ಬಳ್ಳಿ: ರಾಜ್ಯದಲ್ಲಿ ಡ್ರಗ್ಸ್, ಗಾಂಜಾ, ನಿಯಂತ್ರಣಕ್ಕೆ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಹುಬ್ಬಳ್ಳಿ, ಬೆಂಗಳೂರು, ಮಂಗಳೂರು ಭಾಗದಲ್ಲಿ ಹೆಚ್ಚು ಡ್ರಗ್ಸ್ ಪ್ರಕರಣಗಳು ಬೆಳಕಿಗೆ ಬಂದಿರುವುದೇ ಇದಕ್ಕೆ ನಿದರ್ಶನ ಎಂದು ಹೇಳಿದರು.

ಡ್ರಗ್ಸ್ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ತೀರಾ ಬೇಜವಾಬ್ದಾರಿ ತೋರುತ್ತಿದೆ. ಹೀಗಾಗಿ ಇಲ್ಲಿ ಡ್ರಗ್ ಮಾಫಿಯಾ ತಲೆ ಎತ್ತುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಡ್ರಗ್ಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ತ್ವರಿತವಾಗಿ, ಕಠಿಣ ಕ್ರಮ ಜರುಗಿಸಬೇಕು. ಇಲ್ಲದೇ ಹೋದರೆ ಬರುವ ದಿನಗಳಲ್ಲಿ ಕರ್ನಾಟಕ ಪಂಜಾಬ್ ಅನ್ನು ಮೀರಿಸಬಹುದು ಎಚ್ಚರ ವಹಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಅವಕಾಶ ಬೇಡ. ಯುವ ಸಮೂಹ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.


Spread the love

Leave a Reply

Your email address will not be published. Required fields are marked *