ಧಾರವಾಡದಲ್ಲಿ ಮಮತಾ ಸರಕಾರದ ವಿರುದ್ಧ ಪ್ರತಿಭಟನೆ
ಧಾರವಾಡ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದ ದೌರ್ಜನ್ಯ ಖಂಡಿಸಿ ಧಾರವಾಡ ಕೋರ್ಟ್ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಿತು.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿರುವ ಪಶ್ಚಿಮ ಬಂಗಾಳ ಸರ್ಕಾರದ ನಡೆ ತೀವ್ರ ಖಂಡನೀಯ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆ ಮತ್ತು ಸರಣಿ ಹತ್ಯೆಗಳು ನಡೆಯುತ್ತಿದೆ ಎಂದು ದೂರಿದ ಕಾರ್ಯಕರ್ತರು ಸರಕಾರ ಕ್ರಮವನ್ನ ಖಂಡಿಸಿದರು.
ಪಶ್ಚಿಮ ಬಂಗಾಳದಲ್ಲಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸುತ್ತಿದ್ದ ವೇಳೆಯಲ್ಲಿ ಅಲ್ಲಿನ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಗೂಂಡಾ ಸರ್ಕಾರ ಹಾಗೂ ಗೂಂಡಾ ಟಿಎಂಸಿ ಕಾರ್ಯಕರ್ತರೇ ನಮ್ಮ ಕಾರ್ಯಕರ್ತರ ಮೇಲೆ ಕಲ್ಲೆಸೆತವನ್ನು ಮಾಡಿ, ಬಾಟಲಿಗಳಿಂದ ಹಲ್ಲೆ ಮಾಡಿದ್ದಾರೆಂದು ಧಾರವಾಡದಲ್ಲಿ ಕಾರ್ಯಕರ್ತರು ದೂರಿದರು.
ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಅಲ್ಲಿನ ಸರ್ಕಾರ ಮಾಡಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಪೊಲೀಸರು ಸಹ ಗೂಂಡಾ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿರುವುದು ಸರಿಯಲ್ಲ. ಈ ಸರ್ವಾಧಿಕಾರಿ ಧೋರಣೆ ಸರ್ಕಾರದ ವಿರುದ್ದ ನಮ್ಮ ಪಕ್ಷವು ನಿರಂತರವಾಗಿ ಹೋರಾಟ ಮಾಡಲಿದೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಲ್ಲಿಕಾರ್ಜುನ ಬಾಳಿಕಾಯಿ ಎಚ್ಚರಿಸಿದರು.
ಧಾರವಾಡ ಗ್ರಾಮಾಂತರ ಜಿಲ್ಲೆ ಓಬಿಸಿ ಮೋರ್ಚಾ ಅಧ್ಯಕ್ಷ ಶಿವು ಬೆಳಾರದ, ಸುನಿಲ ಮೋರೆ, ಶ್ರೀನಿವಾಸ ಕೋಟ್ಯಾನ್, ನಾಗರಾಜ ನಾಯಕ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.