Karnataka Voice

Latest Kannada News

ಈಟ್ ಪಾಕೀಟ್‌ಗೆ ನೂರ್ ಕೊಟ್ಟ ಕುಡೀತಾರ್, ಅದರ್ ಬದ್ಲಿ ಹಾಲ್ ಕುಡೀರಿ: ಶಾಸಕ ವಿನಯ ಕುಲಕರ್ಣಿ…

Spread the love

ಧಾರವಾಡ: SIR ಪ್ರಕ್ರಿಯೆ ರದ್ದುಗೊಳಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

AICC ಕಾರ್ಯಕಾರಿಣಿ ಸದಸ್ಯ ಕಮಲೇಶ್ವರ್ ಪಟೇಲ್ ನೇತೃತ್ವದಲ್ಲಿ ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಬಂಧಿಸುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶಾಸಕ ವಿನಯ ಕುಲಕರ್ಣಿ ಅವರು ಹಾಲು ಮತ್ತು ಬಸ್ ದರ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಜುಟ್ಟಲ, ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸದಾನಂದ ಡಂಗನವರ, ದೀಪಕ ಚಿಂಚೋರೆ, ಅರವಿಂದ ಏಗನಗೌಡರ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.


Spread the love

Leave a Reply

Your email address will not be published. Required fields are marked *

You may have missed