ಇಸ್ಮಾಯಿಲ್ ತಮಾಟಗಾರಗೆ ತಪ್ಪಿದ ‘MLC’- ವಿನಯ ಕುಲಕರ್ಣಿ ನಿವಾಸದ ಮುಂದೆ ಪ್ರತಿಭಟನೆ- ಪೊಲೀಸರೊಂದಿಗೆ ವಾಗ್ವಾದ…!!!

ಧಾರವಾಡ: ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಧಾರವಾಡ ಶಾಸಕ ವಿನಯ ಕುಲಕರ್ಣಿ ನಿವಾಸಕ್ಕೆ ಮುತ್ತಿಗೆ ಹಾಕಲು ಬಂದ ಇಸ್ಮಾಯಿಲ್ ತಮಾಟಗಾರ ಬೆಂಬಲಿಗರನ್ನು ಪೊಲೀಸರು ಖಡಕ್ ಎಚ್ಚರಿಕೆ ನೀಡಿ ಚದುರಿಸಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡದಲ್ಲಿ 144 ಸೆಕ್ಷನ್ ಜಾರಿ ಇದ್ದು, ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಪೊಲೀಸರು ಖಡಕ್ ಎಚ್ಚರಿಕೆಯನ್ನು ಪ್ರತಿಭಟನಾಕಾರರಿಗೆ ನೀಡಿದರು. ಪ್ರತಿಭಟನಾಕಾರರು ಪೊಲೀಸರ ಜೊತೆಗೆ ಕೆಲ ಹೊತ್ತು ನಮ್ಮ ನಾಯಕರ ಬಳಿ ನ್ಯಾಯ ಕೇಳಲು ಬಂದಿದ್ದೇವೆ. ನಮ್ಮ ಹಕ್ಕು ಕೇಳುತ್ತಿದ್ದೇವೆ ಎಂದು ವಾಗ್ವಾದಕ್ಕೆ ಇಳಿದಿದ್ದಾರೆ.
ಪ್ರತಿಭಟನೆ ಹಾಗೂ ಮುತ್ತಿಗೆ ಹಾಕಲು ಅವಕಾಶ ಇಲ್ಲ, ಜೂನ್ 5 ರ ವರೆಗೆ ಸಾಧ್ಯವಿಲ್ಲ, ನೀವು ಪೋನ್ ಮೂಲಕ ಮಾತನಾಡಿ ಎಂದು ಇಸ್ಮಾಯಿಲ್ ತಮಾಟಗಾರ ಬೆಂಬಲಿಗರಿಗೆ ಪೊಲೀಸರು ಬಿಸಿ ಮುಟ್ಟಿಸಿ ಕಾನೂನು ಕ್ರಮದ ಎಚ್ಚರಿಕೆ ನೀಡಿದರು.
ನಂತರ ಅಂಜುಮನ್ ಇಸ್ಲಾಂ ಸಂಸ್ಥೆಯ ಮುಖಂಡರು ಹಾಗೂ ಕೆಲ ಕಾಂಗ್ರೆಸ್ ಮುಖಂಡರು ಮಧ್ಯೆ ಪ್ರವೇಶಿಸಿ ಪ್ರತಿಭಟನೆ ಕೈಬಿಟ್ಟು ಮನೆಗಳಿಗೆ ತೆರಳಿದರು.
ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಾಟಗಾರ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಅಂಜುಮನ್ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಇಸ್ಮಾಯಿಲ್ ತಮಾಟಗಾರ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಸಾಮಾಜಿಕ ನ್ಯಾಯ ತಳಹದಿಯಲ್ಲಿ ಮುಸ್ಲಿಂ ಸಮುದಾಯದ ಮುಂಚೂಣಿಯಲ್ಲಿರುವ ನಾಯಕ ಇಸ್ಮಾಯಿಲ್ ತಮಾಟಗಾರ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೊಡಬೇಕು ಇಲ್ಲವೇ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಸಮುದಾಯದ ಬೆಂಬಲ ನೀಡುತ್ತಲೇ ಬಂದಿದೆ. ಆದರೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಉತ್ತರ ಕರ್ನಾಟಕ ಭಾಗದ ಮುಸ್ಲಿಂ ಮುಖಂಡ ಇಸ್ಮಾಯಿಲ್ ತಮಾಟಗಾರ ಕಡೆಗಣನೆ ಮಾಡುವುದು ಸರಿಯಲ್ಲ ಎಂದು ಇಸ್ಮಾಯಿಲ್ ತಮಾಟಗಾರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.