ಪಿಎಸ್ಐ ನೇಮಕಾತಿ ಹಗರಣ- ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆಗೆ ಅಸ್ತು…

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಪಿಎಸ್ಐ ನೇಮಕಾತಿ ಹಗರಣವನ್ನ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಲು ರಾಜ್ಯ ಸರಕಾರ ತೀರ್ಮಾನಿಸಿ ಆದೇಶ ಹೊರಡಿಸಿದೆ.
ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ನೇತೃತ್ವದಲ್ಲಿ ಆಯೋಗ ತನಿಖೆ ಮಾಡಲಿರುವ ಬಗ್ಗೆ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಪ್ರಕರಣವನ್ನ ತನಿಖೆಗೆ ನೀಡುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಂಡಿದ್ದಾರೆ.