Posts Slider

Karnataka Voice

Latest Kannada News

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ

Spread the love

ಹುಬ್ಬಳ್ಳಿ: ಗುರುವಾರ ದಿನಾಂಕ 18 ರಂದು ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ  ಪದವಿಪೂರ್ವ ಶಿಕ್ಷಣ ಇಲಾಖೆಯ ಕೋರಿಕೆಯಂತೆ ಹುಬ್ಬಳ್ಳಿ ಗ್ರಾಮಾಂತರ ವಿಭಾಗದಿಂದ 114 ಬಸ್ಸುಗಳ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ್ ತಿಳಿಸಿದ್ದಾರೆ.

ತಾಲ್ಲೂಕುವಾರು

ಕಲಘಟಗಿ    35

ಕುಂದಗೋಳ 34

ನವಲಗುಂದ  15

ಅಣ್ಣಿಗೇರಿ      30 ಬಸ್ಸುಗಳನ್ನು ನಿಯೋಜಿಸಲಾಗಿದೆ.

ಎಲ್ಲಾ ಬಸ್ಸುಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ. ಸೋಡಿಯಂ ಹೈಪೋಕ್ಲೋರೈಟ್ ದ್ರಾವಣ ಸಿಂಪಡಿಸಿ ಸ್ಯಾನಿಟೈಜೇಶನ್ ಮಾಡಲಾಗಿರುತ್ತದೆ. ವಿವಿಧ ಊರುಗಳಿಂದ ಪರೀಕ್ಷಾ ಕೇಂದ್ರಗಳಿರುವ ಸ್ಥಳಗಳಿಗೆ ಮಾರ್ಗ ನಕ್ಷೆ ರೂಪಿಸಲಾಗಿದ್ದು ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಅವಶ್ಯವಿರುವಷ್ಟು ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ. ಕೆಲವು  ಬಸ್ಸುಗಳು ಬುಧವಾರ ರಾತ್ರಿಯೇ ಘಟಕಗಳಿಂದ ಹೊರಟು ತಾಲ್ಲೂಕು ಕೇಂದ್ರಗಳಲ್ಲಿ ತಂಗುತ್ತವೆ. ಇನ್ನುಳಿದ ಬಸ್ಸುಗಳು ಬೆಳಗಿನ ಜಾವ ಘಟಕಗಳಿಂದ ಹೊರಟು ನಿಗದಿತ ಸಮಯದಲ್ಲಿ ವಿವಿಧ ಊರುಗಳಿಗೆ ತೆರಳಿ ಅಲ್ಲಿಂದ ಪರೀಕ್ಷಾರ್ಥಿಗಳನ್ನು ಹತ್ತಿಸಿಕೊಂಡು ನಿಗಧಿತ ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ತಲುಪಿಸಲು ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಮಾರ್ಗದರ್ಶಿ  ನಿರ್ದೇಶನಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳ ಪಾಲನೆ ಬಗ್ಗೆ  ಚಾಲಕರು-ನಿರ್ವಾಹಕರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿರುತ್ತದೆ. ಈ ಬಸ್ಸುಗಳ ಸುಗಮ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಸಾರಿಗೆ ಸಂಸ್ಥೆಯಿಂದ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು  ಎಚ್. ರಾಮನಗೌಡರ್ ವಿವರಿಸಿದ್ದಾರೆ.


Spread the love

Leave a Reply

Your email address will not be published. Required fields are marked *